ಬೆಂಗಳೂರು,ಮಾರ್ಚ್,12,2025 (www.justkannada.in): ಚಿನ್ನಕಳ್ಳ ಸಾಗಾಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾರಾವ್ ಜಾಮೀನು ಅರ್ಜಿ ವಿಚಾರಣೆಯನ್ನ ಆರ್ಥಿಕ ವಿಶೇಷ ಕೋರ್ಟ್ ಮುಂದೂಡಿಕೆ ಮಾಡಿದೆ.
ಪ್ರಕರಣ ಸಂಬಂಧ ನಟಿ ರನ್ಯಾರಾವ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಇಂದು ಬೆಂಗಳೂರು ಆರ್ಥಿಕ ವಿಶೇಷ ಕೋರ್ಟ್ ನಲ್ಲಿ ನಡೆಯಿತು. ನಟಿ ರನ್ಯಾರಾವ್ ಪರ ಹಿರಿಯ ವಕೀಲ ಕಿರಣ್ ಜವಳಿ ವಾದ ಮಂಡನೆ ಮಾಡಿದರು.
ನಟಿ ರನ್ಯಾರಾವ್ ಪರ ವಾದಮಂಡನೆ ಅಂತ್ಯಗೊಂಡ ಬೆನ್ನಲ್ಲೆ ನ್ಯಾಯಾಲಯ ಜಾಮೀನು ಅರ್ಜಿ ವಿಚಾರಣೆಯನ್ನ ಮಧ್ಯಾಹ್ನ3 ಗಂಟೆಗೆ ಮುಂದೂಡಿಕೆ ಮಾಡಿದೆ.
Key words: Gold smuggling case, Actress, Ranyarao, bail, hearing