ಮೈಸೂರು,ಸೆಪ್ಟಂಬರ್,19,2020(www.justkannada.in): ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣವನ್ನು ಶೇಕಡ 9ಕ್ಕೆ ಹೆಚ್ಚಿಸಿ, ಕರ್ನಾಟಕ ರಾಜ್ಯದಲ್ಲಿ 30 ಜಿಲ್ಲೆಗಳಲ್ಲೂ ವಿಸ್ತಾರವಾಗಿ ಹರಡಿಕೊಂಡಿರುವ ಕುರುಬ ಜಾತಿಯನ್ನು ಪರಿಶಿಷ್ಟ ಪಂಗಡ ಮೀಸಲಾತಿ ಪಟ್ಟಿಗೆ ಸೇರಿಸಬೇಕೆಂದು ಹಾಲುಮತ ಮಹಾಸಭಾದ ಸದಸ್ಯರು ಮನವಿ ಮಾಡಿದರು,
ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ವಿಜಯಕುಮಾರ್ ಮಾತನಾಡಿ ಕುರುಬ ಸಮಾಜವು ಶೈಕ್ಷಣಿಕವಾಗಿ , ಆರ್ಥಿಕವಾಗಿ, ಔದ್ಯೋಗಿಕವಾಗಿ ಹಾಗೂ ರಾಜಕೀಯವಾಗಿಯೂ ಹಿಂದುಳಿದಿದೆ. ಇಂದಿಗೂ ಸಹ ಅಲೆಮಾರಿ ಜೀವನ ನಡೆಸುತ್ತಿರುವ, ಬುಡಕಟ್ಟು ಸಂಸ್ಕೃತಿಗಳನ್ನು ಆಚರಿಸುತ್ತಾ ಜೀವನ ಸಾಗಿಸುತ್ತಿದ್ದಾರೆ . ಭಾರತ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿದ್ದರೂ ಸಹ ಕರ್ನಾಟಕದಲ್ಲಿ ಕುರುಬ ಸಮುದಾಯ ಮೀಸಲಾತಿಯಿಂದ ವಂಚಿತವಾಗಿದೆ, ಭಾರತ ದೇಶದಲ್ಲಿ ಬುಡಕಟ್ಟು ಜನಾಂಗವಾಗಿರುವ ಕುರುಬ ಸಮುದಾಯವು ಬ್ರಿಟಿಷರ ಆಳ್ವಿಕೆಯಲ್ಲೂ ಸಹ ಪರಿಶಿಷ್ಟ ಪಂಗಡ ಮೀಸಲಾತಿ ಪಟ್ಟಿಯಲ್ಲಿದೆ ಎಂದರು. .
ಕರ್ನಾಟಕ ರಾಜ್ಯದಲ್ಲಿಯೂ ಸಹ ಜೇನು ಕುರುಬ, ಕಾಡು ಕುರುಬ, ಗೊಂಡ, ರಾಜಗೊಂಡ ಮತ್ತು ಕುರುಬ ಪರಿಶಿಷ್ಟ ಪಂಗಡ ಪಟ್ಟಿಯಲ್ಲಿದೆ . ಈ ಸೌಲಭ್ಯ ಕೆಲವೇ ಜಿಲ್ಲೆಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ . 28 ನೇ ಪಟ್ಟಿಯಲ್ಲಿರುವ ಕುರುಬ, ಇದನ್ನು ರಾಜ್ಯದ 30 ಜಿಲ್ಲೆಗಳಿಗೂ ವಿಸ್ತರಿಸಬೇಕೆಂದು ಅದರ ಸಂಬಂಧ ಹಲವು ವರ್ಷಗಳಿಂದ ಜಾಗೃತಿ ಸಭೆಗಳು , ಸಂವಾದಗಳು , ಬೃಹತ್ ಸಮಾವೇಶದಲ್ಲಿನ ನಿರ್ಣಯಗಳನ್ನು ಹಾಗೂ ಎಲ್ಲಾ ಜಿಲ್ಲಾಧಿಕಾರಿಗಳ ಮೂಲಕವೂ ಸರ್ಕಾರಗಳಿಗೆ ಮನವಿಯನ್ನು ಸಲ್ಲಿಸಲಾಗಿದೆ ಎಂದು ವಿಜಯ ಕುಮಾರ್ ತಿಳಿಸಿದರು.
ಮಾನ್ಯ ಮುಖ್ಯಮಂತ್ರಿಗಳು , ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣವನ್ನು ಶೇಕಡ 9 ಕ್ಕೆ ಹೆಚ್ಚಿಸಿ, ಕರ್ನಾಟಕ ರಾಜ್ಯದಲ್ಲಿ 30 ಜಿಲ್ಲೆಗಳಲ್ಲೂ ವಿಸ್ತಾರವಾಗಿ ಹರಡಿಕೊಂಡಿರುವ ಕುರುಬ ಜಾತಿಯನ್ನು ಪರಿಶಿಷ್ಟ ಪಂಗಡ ಮೀಸಲಾತಿ ಪಟ್ಟಿಗೆ ಸೇರಿಸಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದರು.
ಸುದ್ದಿಗೋಷ್ಟಿಯಲ್ಲಿ ಸಮೃದ್ಧಿ ಸುರೇಶ್, ನಾಗೇಶ್ ಗೌಡ , ಉಮೇಶ್ ಕೋಟೆ, ಶಿವರಾಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Key words: Add –kuruba community – Scheduled Tribe-mysore- halumatha mahasabha