ಹೆಚ್.ಡಿ ರೇವಣ್ಣ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ: ತುರ್ತು ನೋಟಿಸ್.

ಬೆಂಗಳೂರು,ಮೇ,31,2024 (www.justkannada.in):  ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪಡೆದಿದ್ದ ಜಾಮೀನನ್ನು ರದ್ದು ಮಾಡುವಂತೆ ಕೋರಿ ಎಸ್ ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಮುಂದೂಡಿಕೆ ಮಾಡಿದೆ.

ಹೈಕೋರ್ಟ್ ನ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ತುರ್ತು ನೋಟಿಸ್ ಜಾರಿಗೊಳಿಸಿದೆ.  ನೋಟಿಸ್ ತಲುಪಿದ ತಕ್ಷಣ ವಿಚಾರಣೆ  ನಡೆಸಲಾಗುತ್ತದೆ ಎಂದು ಹೈಕೋರ್ಟ್ ತಿಳಿಸಿದೆ.

ನೋಟಿಸ್ ಜಾರಿಯಾದ  ನಂತರ ನ್ಯಾ. ಕೃಷ್ಣ ಎಸ್ ದೀಕ್ಷಿತ್ ಇದ್ದ ಪೀಠ ವಿಚಾರಣೆ ನಡೆಸಲಿದೆ.  ಕೆಆರ್ ನಗರ ಸಂತ್ರಸ್ತ ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಜಾಮೀನು ಪಡೆದಿದ್ದರು.  ಈ ಜಾಮೀನು ರದ್ದುಗೊಳಿಸುವಂತೆ ಕೋರಿ ಎಸ್ ಐಟಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.

Key words: Adjournment – HD Revanna- bail –cancel-application