ಬೆಂಗಳೂರು,ಸೆಪ್ಟೆಂಬರ್,16,2020(www.justkannada.in) : ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ನಟಿ ರಾಗಿಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೆಪ್ಟಂಬರ್ 19ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಸದ್ಯ ನಟಿ ರಾಗಿಣಿ ನ್ಯಾಯಾಂಗ ಬಂಧನದಲ್ಲಿದ್ದು ಈ ನಡುವೆ ನಟಿ ರಾಗಿಣಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಜಾಮೀನು ಅರ್ಜಿ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿತ್ತು. ಆದರೆ ಸಿಸಿಬಿ ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸಲು ಅವಕಾಶ ಕೇಳಿದ್ದು, ಈ ಹಿನ್ನೆಲೆಯಲ್ಲಿ ಎನ್ ಡಿ ಪಿ ಎಸ್ ಕೋರ್ಟ್ ಮತ್ತೆ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿದೆ. ನಟಿ ರಾಗಿಣಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
key words : Adjournment-hearing-Ragini-Bale-application