1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ಬೆಂಗಳೂರು, ಏಪ್ರಿಲ್, 16,2025 (www.justkannada.in):  1ನೇ ತರಗತಿಗೆ ಮಕ್ಕಳ  ಪ್ರವೇಶಾತಿಗೆ ಇರುವ ವಯೋಮಿತಿಯನ್ನು ಸಡಿಲಗೊಳಿಸಿದ್ದು5 ವರ್ಷ 5 ತಿಂಗಳು ವಯಸ್ಸನ್ನ ನಿಗದಿ ಮಾಡಲಾಗಿದೆ ಎಂದು  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, 1ನೇ ತರಗತಿಗೆ ಪ್ರವೇಶಕ್ಕೆ  5 ವರ್ಷ 5 ತಿಂಗಳಾಗಿದ್ದರೂ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ. ಎಸ್‌ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ತಿಳಿಸಿದರು.

ಎಲ್​ಕೆಜಿ, ಯುಕೆಜಿ ಆಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ ನೀಡಲಾಗುತ್ತದೆ. ಮಕ್ಕಳಿಗೆ 5 ವರ್ಷ 5 ತಿಂಗಳಾಗಿರಬೇಕು. ಪೋಷಕರ ಒತ್ತಾಯದ ಮೇರೆಗೆ ಇದೊಂದು ವರ್ಷ ಮಾತ್ರ ಅವಕಾಶ ನೀಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

Key words: Age limit, relaxed ,admission , 1st class, Minister, Madhu Bangarappa