ಬೆಂಗಳೂರು,ಆ,7,2019(www.justkannada.in): ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಹಿನ್ನೆಲೆ ಕೇಂದ್ರ ಸಚಿವರಾದ ಸುರೇಶ್ ಅಂಗಡಿ ಸೇರಿದಂತೆ ಎಲ್ಲರೂ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಇರುವಂತೆ ಸೂಚಿಸಿದ್ದೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಯಿಂದ ಬೆಂಗಳೂರಿಗೆ ಮರಳಿದ್ದು, ಧವಳಗಿರಿ ನಿವಾಸಕ್ಕೆ ಆಗಮಿಸಿದರು. ಈ ವೇಳೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳುವಂತೆ ಅಮಿತ್ ಷಾ ಸೂಚಿಸಿದ್ದಾರೆ. ಸಚಿವ ಸಂಪುಟ ರಚನೆ ಬಗ್ಗೆ ತಲೆ ಕೆಡಿಸ್ಕೋಬೇಡ. ಅದೆಲ್ಲ ಆಮೇಲೆ ನೋಡೋಣ. ಮೊದಲು ಪ್ರವಾಸ ಪರಿಸ್ಥಿತಿ ನಿಭಾಯಿಸಿ ಅಂತ ಅಮಿತ್ ಷಾ ತಿಳಿಸಿದ್ದಾರೆ. ಈಗ ನಾನು ಬೆಳಗಾವಿಗೆ ತೆರಳುತ್ತಿದ್ದೇನೆ. ಮೂರ್ನಾಲ್ಕು ದಿನ ಬಿಟ್ಟು ಮತ್ತೆ ದೆಹಲಿಗೆ ಹೋಗ್ತೇನೆ. ಇದೇ 10 ಮತ್ತು 11 ಕ್ಕೆ ದೆಹಲಿಗೆ ಹೋಗುತ್ತೇನೆ. ಆಗ ಸಚಿವ ಸಂಪುಟ ಬಗ್ಗೆ ಚರ್ಚೆ ಮಾಡ್ತೇನೆ ಎಂದರು.
ಕೇಂದ್ರ ಸಚಿವರಾದ ಸುರೇಶ್ ಅಂಗಡಿ ಸೇರಿದಂತೆ ಎಲ್ರೂ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಇರುವಂತೆ ಸೂಚಿಸಿದ್ದೇನೆ ಎಲ್ಲ ಸಂಸದರೂ, ಶಾಸಕರಿಗೂ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಇರುವಂತೆ ತಿಳಿಸಿದ್ದೇನೆ ಎಂದು ಬಿಎಸ್ ವೈ ತಿಳಿಸಿದರು.
ಸಿಎಂ ಬಿಎಸ್ ಯಡಿಯೂರಪ್ಪ ಈಗಾಗಲೇ ಬೆಳಗಾವಿಗೆ ಹೊರಟಿದ್ದು ಎಚ್ ಎ ಎಲ್ ಮೂಲಕ ವಿಶೇಷ ವಿಮಾನದಲ್ಲಿ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ. ಇಂದು ರಾತ್ರಿ ಬೆಳಗಾವಿಯ ಮಳೆ ಹಾನಿ ಪ್ರದೇಶಗಳಲ್ಲಿ ಸಿಎಂ ಬಿಎಸ್ ವೈ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಬಳಿಕ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆಯಲಿದ್ದಾರೆ. ನಾಳೆ ವೈಮಾನಿಕ ಸಮೀಕ್ಷೆ ಮೂಲಕ ಬೆಳಗಾವಿ ಮತ್ತು ಬಾಗಲಕೋಟೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಎಂ ಪರಿಶೀಲನೆ ನಡೆಸಲಿದ್ದಾರೆ.
key words: advised –MLA-MPs – flood-affected- districts-CM- BS Yeddyurappa