ಕಲಬುರ್ಗಿ,ಅಕ್ಟೋಬರ್,21,2020(www.justkannada.in): ಹವಮಾನ ವೈಪರಿತ್ಯ ಹಿನ್ನೆಲೆ ನೆರೆ ಪೀಡಿತ ಪ್ರದೇಶಗಳಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನಡೆಸುತ್ತಿದ್ದ ವೈಮಾನಿಕ ಸಮೀಕ್ಷೆ ರದ್ಧಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಈ ಹಿನ್ನೆಲೆ ಇಂದಿನಿಂದ ಕಲಬುರುಗಿ, ವಿಜಯಪುರ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲು ಸಿಎಂ ಬಿಎಸ್ ಯಡಿಯೂರಪ್ಪ ಮುಂದಾಗಿದ್ದರು. ಇಂದು ವಿಜಯಪುರ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಬೇಕಿತ್ತು.
ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು, ಹವಾಮಾನ ವೈಪರಿತ್ಯ ಕಾರಣದಿಂದಾಗಿ ವೈಮಾನಿಕ ಸಮೀಕ್ಷೆಯನ್ನ ರದ್ದುಗೊಳಿಸಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ. ಈ ನಡುವೆ ಅಲಮಟ್ಟಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅಧಿಕಾರಿಗಳ ಸಭೆ ನಡೆಸಬೇಕಿತ್ತು.ಆದರೆ ಸಭೆಯೂ ರದ್ಧಾಗಿದೆ.
Key words: Aerial survy – CM -BS yeddyurappa-cancel