ಎರಡು ತಿಂಗಳ ನಂತರ ನನ್ನ ಮುಂದಿನ ರಾಜಕೀಯ ತೀರ್ಮಾನ ಪ್ರಕಟ- ಶಾಸಕ ಜಿ.ಟಿ ದೇವೇಗೌಡ.

ಮೈಸೂರು,ಜುಲೈ,4,2022(www.justkannada.in): ಎರಡು ತಿಂಗಳ ನಂತರ ನನ್ನ ಮುಂದಿನ ರಾಜಕೀಯ ತೀರ್ಮಾನ ಮಾಡುತ್ತೇನೆ ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ  ಶಾಸಕ ಜಿಟಿ ದೇವೇಗೌಡ, ಎರಡು ತಿಂಗಳ ನಂತರ ಕ್ಷೇತ್ರದ ಜನರ ಸಭೆ ಕರೆಯುತ್ತೇನೆ. ಸಭೆಯಲ್ಲಿ ಮುಕ್ತ ಚರ್ಚೆ ಮಾಡುತ್ತೇನೆ. ಜನರ ಅಭಿಪ್ರಾಯದಂತೆ ನನ್ನ ನಿರ್ಧಾರ ಪ್ರಕಟಿಸುತ್ತೇನೆ. ಇದರಲ್ಲಿ ಯಾವ ಗೊಂದಲಗಳು  ಇಲ್ಲ. ಐದು ವರ್ಷ ನಾನು ಜೆಡಿಎಸ್ ಶಾಸಕನಾಗಿ ಜನ ಮತ ಹಾಕಿದ್ದಾರೆ. ಹೀಗಾಗಿ ಯಾವುದೇ ಚುನಾವಣೆಯಲ್ಲಿ ಪಕ್ಷ ವಿಪ್ ಕೊಡಲಿ ಬಿಡಲಿ, ನಾನು ಜೆಡಿಎಸ್ ಪರವಾಗಿ ಮತ ಹಾಕುತ್ತೇನೆ. ಯಾಕೆಂದರೆ ನನ್ನ ಆತ್ಮಸಾಕ್ಷಿ ಗೆ ದ್ರೋಹ ಬಗೆಯುವ ಕೆಲಸ ಯಾವತ್ತೂ ಮಾಡುವುದಿಲ್ಲ. ಕಳೆದ ಮೂರು ವರ್ಷಗಳಿಂದ ಪಕ್ಷದ ಯಾವುದೇ ಚಟುವಟಿಕೆಯಲ್ಲಿ ಭಾಗವಹಿಸಿಲ್ಲ ಎಂದರು.

ಸಿದ್ದರಾಮಯ್ಯಗೆ ಅಡ್ವಾನ್ಸ್ ಆಗಿ ವಿಶ್ ಮಾಡಿದ ಜಿಟಿ ದೇವೇಗೌಡ.

ವಿಪಕ್ಷ ನಾಯಕ ಸಿದ್ದರಾಮಯ್ಯ ಹುಟ್ಟುಹಬ್ಬಕ್ಕೆ ಅಡ್ವಾನ್ಸ್ ಆಗಿ ವಿಶ್ ಮಾಡಿದ ಶಾಸಕ ಜಿಟಿ ದೇವೇಗೌಡ, ಸಿದ್ದರಾಮೋತ್ಸವ ಬಗ್ಗೆ ನನಗೆ ಗೊತ್ತಿಲ್ಲ. ನನಗೆ ಇದುವರೆಗೂ ಆಹ್ವಾನ ಪತ್ರಿಕೆ ಬಂದಿಲ್ಲ. ಆಹ್ವಾನ ಪತ್ರಿಕೆ ಬರಲಿ ಬಿಡಲಿ ನಾನು ಸಿದ್ದರಾಮಯ್ಯ ಅವರಿಗೆ ಆರೈಸುತ್ತೇನೆ. ಸ್ವಲ್ಪದಿನ ಮುಂಚಿತವಾಗಿಯೇ ನಾನು ಅವರಿಗೆ ಹುಟ್ಟುಹಬ್ಬದ ಶುಭ ಕೋರುತ್ತೇನೆ ಎಂದಿದ್ದಾರೆ.

Key words: After-two months- next political- decision-MLA-GT Deve Gowda.

ENGLISH SUMMARY…

“I will let you my decision on my next political move in next two months”: MLA GTD
Mysuru, July 4, 2022 (www.justkannada.in): JDS MLA G.T. Devegowda today informed that he would reveal his next political decision within the next two months.
Speaking in Mysuru today, he said, “I will call a meeting of the people of the constituency after two months and hold an open discussion. I will take a decision as per the people’s desire. There is no confusion in this. People have voted me as a JDS MLA for five years. Whichever party may issue a whip in the next election, I will vote in support of the JDS. Because I have never acted against to my conscience. I have not taken part in any activities of any party in the last three years.”
He also extended advance birthday wishes to the leader of the opposition Siddaramaiah. “I don’t know anything about the Siddaramotsava. I have not received any invitation till now. Whether I receive the invitation or not, I wish Siddaramaiah,” he said.
Keywords: G.T. Devegowda/ next political decision/ two months