ಧಾರವಾಡ,ಡಿಸೆಂಬರ್,23,2022(www.justkannada.in): ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಸ್ಥಾನಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ಪೈಪೋಟಿ ಇದೆ. ಈ ನಡುವೆ ಸಿದ್ಧರಾಮಯ್ಯ ಹೋದಲೆಲ್ಲಾ ಅವರ ಅಭಿಮಾನಿಗಳು ಸಿದ್ಧರಾಮಯ್ಯ ಮುಂದಿನ ಸಿಎಂ ಸಿದ್ಧರಾಮಯ್ಯ ಎಂಬ ಘೋಷಣೆ ಕೂಗಿವುದು ಸಾಮಾನ್ಯವಾಗಿಬಿಟ್ಟಿದೆ.
ಈ ಮಧ್ಯೆ ಮತ್ತೆ ಸಿದ್ದರಾಮಯ್ಯ ಮುಂದಿನ ಸಿಎಂ ಎಂಬ ಕೂಗು ಮೊಳಗಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲ್ಲೂಕಿನ ಸಂಶಿ ಗ್ರಾಮದಲ್ಲಿ ಸಿದ್ಧರಾಮಯ್ಯ ಅಭಿಮಾನಿಗಳು ಈ ಘೋಷಣೆಯನ್ನ ಕೂಗಿದಿದ್ದಾರೆ.
ಸಂಶಿ ಗ್ರಾಮದಲ್ಲಿ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಭಾಗಿಯಾಗಿದ್ದರು. ಕಾರ್ಯಕ್ರಮಕ್ಕೂ ಮುನ್ನ ಸಿದ್ಧರಾಮಯ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಗ್ರಾಮದ ಕರಿಸಿದ್ದೇಶ್ವರ ದೇಗಲದಲ್ಲಿ ಪೂಜೆ ಸಲ್ಲಿಸಿದ್ದರು. ಈ ವೇಳೆ ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ.
Key words: Again- Siddaramaiah -called – next CM.