ಬೆಂಗಳೂರು,ನವೆಂಬರ್,01, 2020(www.justkannada.in) : ಚಲನಚಿತ್ರ ನಟ ದರ್ಶನ್ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ನಟ ದರ್ಶನ್ ಇತ್ತೀಚೆಗೆ ಆರ್.ಆರ್.ನಗರ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚುನಾವಣಾ ಪ್ರಚಾರ ಮಾಡಿದ್ದರು. ಈ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ದೂರು ದಾಖಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ತಿಳಿಸಿದ್ದಾರೆ.
ಕಳೆದ ಶುಕ್ರವಾರ ಇಡೀ ದಿನ ದರ್ಶನ್ ಪ್ರಚಾರದಲ್ಲಿ ತೊಡಗಿದ್ದರು. ದರ್ಶನ್ ಜೊತೆ ನಟಿ ಅಮೂಲ್ಯ ಮತ್ತು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಕೂಡ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ.
key words : Against-actor-Darshan-Under-Disaster-Management-Act-Case-record