ಮೈಸೂರು,ಜೂನ್,2,2021(www.justkannada.in): ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ ಚಾಲಕರಿಗೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಲಾವಿದರಿಗೆ ಸರ್ಕಾರ ಘೋಷಣೆ ಮಾಡಿರುವ ಪರಿಹಾರ ಧನವನ್ನ ಪಡೆಯಲು ಅರ್ಜಿ ಸಲ್ಲಿಕೆಗಾಗಿ ಜೂನ್ 3 ರಂದು(ನಾಳೆ) ಮೈಸೂರು ಜಿಲ್ಲಾದ್ಯಂತ ಸೇವಾಸಿಂಧು ಕೇಂದ್ರ ತೆರೆಯಲು ಅನುಮತಿ ನೀಡಲಾಗಿದೆ.
ಈ ಕುರಿತು ಆದೇಶ ಹೊರಡಿಸಿರುವ ಮೈಸೂರು ಡಿಸಿ ರೋಹಿಣಿ ಸಿಂಧೂರಿ, ಸರ್ಕಾರದ ಆದೇಶ ಸಂಖ್ಯೆ: ಟಿಡಿ 126 ಟಿಡಿಒ 2021, ದಿ:21-05-2021 ರಲ್ಲಿ ಕೋವಿಡ್-19ರ 2ನೇ ಅಲೆಯ ತೀವ್ರತೆ ಹಿನ್ನಲೆಯಲ್ಲಿ ವಾಣಿಜ್ಯ ಮತ್ತಿತರ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸಿ ಆದೇಶಿಸಿರುವುದರಿಂದ ಆಟೋ, ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ ಚಾಲಕರಿಗೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಲಾವಿದರಿಗೆ ರೂ.3000/- ಗಳ ಪರಿಹಾರ ಧನವನ್ನು ನೀಡಲು ಷರತ್ತಿಗೊಳಪಟ್ಟು ಮಂಜೂರಾತಿ ನೀಡಿ ಆದೇಶಿಸಲಾಗಿದೆ. ಸದರಿ ಪರಿಹಾರ ಧನವನ್ನು ಪಡೆಯಲು ಆನ್ ಲೈನ್ ಮೂಲಕ ಸೇವಾ ಸಿಂಧು ವೆಬ್ ಪೋರ್ಟಲ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ದಿನಾಂಕ: 27-05-2021 ರಂದು ಬೆಳಿಗ್ಗೆ 11 ರಿಂದ ಪ್ರಾರಂಭಿಸಲಾಗಿರುತ್ತದೆ.
ಆದ್ದರಿಂದ, ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಆನ್ ಲೈನ್ ಮೂಲಕ ಸೇವಾ ಸಿಂಧು ಅಂತರ್ಜಾಲದಲ್ಲಿ ಸಲ್ಲಿಸಿ ಪರಿಹಾರ ಧನವನ್ನು ಪಡೆದುಕೊಳ್ಳಲು ಅನುವಾಗುವಂತೆ ದಿನಾಂಕ: 03-06-2021 ರ ಗುರುವಾರ ಬೆಳಗ್ಗೆ 6.00 ಗಂಟೆಯಿಂದ 12.00 ಗಂಟೆಯವರೆಗೆ ಮೈಸೂರು ಜಿಲ್ಲಾದ್ಯಂತ ಸೇವಾಸಿಂಧು ಕೇಂದ್ರ ತೆರೆಯಲು ಅನುಮತಿಸಿದೆ ಎಂದು ತಿಳಿಸಿದ್ದಾರೆ.
Key words: agree-open seva sindu centre-Mysore district – application- compensation-mysore-DC-order