ಬೆಂಗಳೂರು,ಆಗಸ್ಟ್,19,2023(www.justkannada.in): ವಲಸಿಗರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಪಕ್ಷದ ತತ್ವ ಸಿದ್ಧಾಂತ ಒಪ್ಪಿ, ಷರತ್ತು ಹಾಕದೆ ಬಂದರೆ ಸ್ವಾಗತ ಎಂದಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ನಾವು ಆಪರೇಷನ್ ಹಸ್ತ ಮಾಡಲು ಹೊರಟಿಲ್ಲ. ಬಿಜೆಪಿ, ಜೆಡಿಎಸ್ ಪಕ್ಷ ಒಡೆಯಲು ಹೋಗುತ್ತಿಲ್ಲ. ಯಾರ ಅಸ್ತಿತ್ವ ಏನು ಅಂತಾ ಜನರೇ ತೋರಿಸಿಕೊಟ್ಟಿದ್ದಾರೆ. ಬಿಜೆಪಿ, ಜೆಡಿಎಸ್ ತನ್ನ ಅಸ್ತಿತ್ವ ಕಾಪಾಡಿಕೊಂಡು ಹೋಗಲಿ ಎಂದು ಟಾಂಗ್ ನೀಡಿದರು.
Key words: Agreeing – principle – Congress – welcome -Minister -Priyank Kharge