ವಿಜಯಪುರ,ಫೆ,25,2020(www.justkannada.in): ಭಾರತ ಪ್ರವಾಸದಲ್ಲಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ ಭಾರತದ ಪ್ರಧಾನಿ ಮೋದಿ ಅವರು ವ್ಯಾಪಾರ, ರಕ್ಷಣೆಗೆ ಸಂಬಂಧಿಸಿದಂತೆ ಒಪ್ಪಂದ ಮಾಡಿಕೊಳ್ಳಲಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ರೈತರಿಗೆ ತೊಂದರೆಯಾಗುವ ಒಪ್ಪಂದ ಮಾಡಿಕೊಳ್ಳಬಾರದು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದರು.
ವಿಜಯಪುರದಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ರೈತರಿಗೆ ತೊಂದರೆಯಾಗುವ ಒಪ್ಪಂದ ಮಾಡಿಕೊಳ್ಳಬಾರದು ಅಮೇರಿಕಾ ಜತೆ ಅಂತಹ ಒಪ್ಪಂದ ಮಾಡಿಕೊಳ್ಳಬಾರದು ಎಂದರು.
ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಗೆ ತಿರುಗೇಟು ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ನಳೀನ್ ಕುಮಾರ್ ಕಟೀಲ್ ಗೆ ರಾಜಕೀಯ ಜ್ಞಾನವೇ ಇಲ್ಲ, ಅವರಿಗೆ ಅಧ್ಯಕ್ಷ ಸ್ಥಾನ ಹೇಗೆ ಕೊಟ್ಟರೋ ಗೊತ್ತಿಲ್ಲ’ ಎಂದು ಲೇವಡಿ ಮಾಡಿದರು.
ಬಿಜೆಪಿಯ ಕೆಲ ಶಾಸಕರಲ್ಲಿ ಅಸಮಾಧಾನ ಇರುವುದು ಸತ್ಯ. ಆದರೆ, ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲಾರೆ ಎಂದು ಸಿದ್ಧರಾಮಯ್ಯ ಹೇಳಿದರು. ಮಹದಾಯಿ ನೀರು ಹಂಚಿಕೆ ಸಂಬಂಧ ಅಧಿಸೂಚನೆ ಹೊರಡಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಬೇಕು. ಸಿಎಂ , ಸಂಸದರು ನಿಯೋಗ ತೆರಳಿ ಕೇಂದ್ರದ ಮೇಲೆ ಒತ್ತಡ ತರಬೇಕು’ ಎಂದು ಸರ್ಕಾರಕ್ಕೆ ಆಗ್ರಹಿಸಿದರು.
Key words: Agreement -between -India and USA-Former CM Siddaramaiah – farmers