ಬೆಂಗಳೂರು ಅಕ್ಟೊಬರ್,18,2023(www.justkannada.in): ಹೆಚ್ಚುತ್ತಿರುವ ಜನಸಂಖ್ಯೆಗೆ ಪೂರಕವಾಗಿ ಆಹಾರ ಉತ್ಪಾದನೆ ಹೆಚ್ಚಿಸುವಲ್ಲಿ ಕೃಷಿ ವಿವಿಗಳ ಪಾತ್ರ ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ದೇಸಿ ಸಮ್ಮೇಳನ ಮತ್ತು ಬೇಕಿಂಗ್ ಮೌಲ್ಯ ವರ್ಧನಾ ಸಂಸ್ಥೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ಹಸಿರು ಕ್ರಾಂತಿ ಬಳಿಕ ದೇಶ ಆಹಾರ ಸ್ವಾವಲಂಭನೆಯನ್ನು ಸಾಧಿಸಿತು. ಅದಕ್ಕೂ ಮೊದಲು ಅವಲಂಭನೆ ಇತ್ತು. ಇತ್ತೀಚಿಗೆ ನಿಧನರಾದ ಕೃಷಿತಜ್ಞ ಸ್ವಾಮಿನಾಥನ್ ಅವರು ಈ ಹಸಿರು ಕ್ರಾಂತಿಗೆ ಬಹಳಷ್ಟು ಕೊಡುಗೆ ನೀಡಿದ್ದರು. ಆಹಾರ ಉತ್ಪಾದನೆ ಇನ್ನಷ್ಟು ಹೆಚ್ಚಲು, ಗುಣಾತ್ಮಕ ಆಗಲು ಕೃಷಿ ವಿವಿಗಳ ಅಧ್ಯಯನ ಮತ್ತು ಸಂಶೋಧನೆಗಳು ಹೆಚ್ಚಾಗಬೇಕು ಎಂದರು.
ಕುಷ್ಕಿ ಭೂಮಿ ಅತಿ ಹೆಚ್ವು ಇರುವ ರಾಜ್ಯ ನಮ್ಮದು. ವಾತಾವರಣ ಬದಲಾವಣೆಯಿಂದ ರಾಜ್ಯ ನಿರಂತರವಾಗಿ ಅತಿವೃಷ್ಟಿ, ಅನಾವೃಷ್ಟಿಗೆ ತುತ್ತಾಗುತ್ತಿದೆ. ಈ ಕಾರಣಕ್ಕೇ ನಮ್ಮ ರೈತರಿಗೆ ಕೃಷಿ, ತಜ್ಞರು ಮತ್ತು ತಂತ್ರಜ್ಞರ ನೆರವು ಅತ್ಯಗತ್ಯ ಎಂದರು.
ಇದಕ್ಕಾಗಿಯೇ ಕೃಷಿ ವಿವಿಗಳು ಹೆಚ್ಚು ಸಂಶೋಧನೆ ನಡೆಸಬೇಕು. ಸಂಶೋಧನೆಗಳು ರೈತರಿಗೆ ಪರಿಣಾಮಕಾರಿಯಾಗಿ ತಲುಪಬೇಕು. ಕಡಿಮೆ ಮಳೆಯಲ್ಲಿ, ಕಡಿಮೆ ನೀರಲ್ಲಿ ಎಂಥಾ ಬೆಳೆ ಬೆಳೆಯಬಹುದು, ಹವಾಮಾನ ವೈಪರೀತ್ಯಕ್ಕೆ ಬೆಳೆ ಹಾಳಾಗದಂತೆ ಏನು ಮಾಡಬೇಕು ಎನ್ನುವ ಕುರಿತಂತೆ ಹೆಚ್ಚೆಚ್ಚು ಅಧ್ಯಯನ, ಸಂಶೋಧನೆಗಳು ನಡೆದು ರೈತರಿಗೆ ತಲುಪುವಂಥಾಗಬೇಕು ಎಂದರು.
Lab to Land-Land to Lab
ಪ್ರಯೋಗಶಾಲೆಗಳಿಂದ ಕೃಷಿ ಭೂಮಿಗೆ ಏನು ತಲುಪಿದೆ, ಕೃಷಿ ಭೂಮಿಯ ಅನುಭವಗಳು ಮತ್ತು ಅಗತ್ಯಗಳು ಪ್ರಯೋಗ ಶಾಲೆಗಳಿಗೆ ಗೊತ್ತಾಗಬೇಕು. ಆಗ ಮಾತ್ರ ಸುಸ್ಥಿರ ಕೃಷಿ ಸಾಧ್ಯವಾಗುತ್ತದೆ. ಇದು ಸಾಧ್ಯವಾಗಬೇಕಾದರೆ Lab to Land-Land to Lab ಪರಿಕಲ್ಪನೆಯಲ್ಲಿ ವೈಜ್ಞಾನಿಕ ಕೆಲಸಗಳನ್ನು ಕೃಷಿ ವಿವಿಗಳು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕೃಷಿ ವಿವಿ ಗಳು ಅಭಿವೃದ್ಧಿ ಪಡಿಸಿರುವ ಹೊಸ ತಳಿಗಳು ರೈತರಿಗೆ ತಲುಪಿವೆಯಾ ಪರೀಕ್ಷಿಸಿಕೊಳ್ಳಿ. ಇಲ್ಲದಿದ್ದರೆ ಹೊಸ ತಳಿಗಳು ಅಭಿವೃದ್ಧಿ ಮಾಡಿ ಏನು ಪ್ರಯೋಜನ ಎಂದರು.
ಸಂಶೋಧನೆ-ಅಧ್ಯಯನ ಮತ್ತು ವಿಸ್ತರಣಾ ಕಾರ್ಯಗಳಿಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.
ಕೃಷಿ ವಿಶ್ವ ವಿದ್ಯಾಲಯ, ರಾಷ್ಟ್ರೀಯ ಕೃಷಿ ವಿಸ್ತರಣಾ ಸಂಸ್ಥೆ, ಕೃಷಿ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕರೂ, ಕಂದಾಯ ಸಚಿವರೂ ಆದ ಕೃಷ್ಣಬೈರೇಗೌಡ ಅವರು ವಹಿಸಿದ್ದರು. ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ, ಶಾಸಕರಾದ ಶರತ್ ಬಚ್ಚೇಗೌಡ, ಕೃಷಿ ವಿವಿ ಕುಲಪತಿಗಳಾದ ಡಾ.ಎಸ್.ವಿ.ಸುರೇಶ್ ಸೇರಿ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Key words: Agricultural- universities – vital role – increasing- food production –CM -Siddaramaiah
ENGLISH SUMMARY
Government will extend its cooperation for research-study and extension programmes
Agricultural universities play a vital role in increasing food production to cater the growing population
Agricultural universities should work on Lab to Land-Land to Lab concept: Chief Minister Siddaramaiah
Bengaluru 18:
Chief Minister Siddaramaiah said that agricultural universities play a vital role in increasing food production to cater the needs of growing population.
He was speaking at the inauguration programme of the new building of Baking Technology and Value Addition Institute and DAESI Sammelana organized by Unisversity of Agricultural Sciences, Bangalore.
The CM said that, after the Green Revolution, our country achieved self-reliance in food production,. There was dependency before that. Renowned agriculturist Swaminathan who has passed away recently had contributed a lot to the green revolution. He also said that the study and research of agricultural universities should be increased to become qualitative and to boost food production and become qualitative.
Ours is the state with the largest amount of dry agricultural land. Due to the climate change, the state is continuously suffering from excessive rains and droughts. It is for this reason that, help of agricultural experts and technicians is essential for our farmers, the CM opined.
The Chief Minister said that agricultural universities should do more research. Research findings should reach the farmers effectively. Extensive studies and researches should be done about the kind of crops that can be grown in less rain and less water and ways to prevent crop damage due to extreme weather conditions should reach the farmers.
Lab to Land-Land to Lab
The CM said that what findings of laboratories has reached agricultural land should be known and labs should know about the experiences and needs of the agricultural land . Only then sustainable agriculture is possible. This can be made possible if agricultural universities adopt its scientific works on the basis of Lab to Land-Land to Lab concept .
The CM instructed to check whether the new varieties developed by agricultural universities have reached the farmers and also asked that what is the use of developing new breeds if it is not reached the farmers ? He also assured that the government will give full cooperation to the research-study and extension programmes.
This program was jointly organized by Agriculture University, National Agricultural Extension Institute and Department of Agriculture which was presided over by MLA and Revenue Minister Krishnabyre Gowda. Agriculture Minister N. Chaluvarayaswamy, MLA Sharath Bachegowda, Chancellor of Agriculture University Dr. SV Suresh and others were present.