ಹಾವೇರಿ,ಜೂ,30,2020(www.justkannada.in): ಹಿರೇಕೆರೂರು ಕ್ಷೇತ್ರದಲ್ಲಿ ಕೊರೊನಾ ಮಹಾಮಾರಿ ಲಗೆಯಿಟ್ಟಿದ್ದು, ಹಿರೇಕೆರೂರನ್ನು ಸೀಲ್ ಡೌನ್ ಮಾಡುವಂತೆ ಕೃಷಿ ಸಚಿವ ಹಾಗೂ ಹಿರೇಕೆರೂರು ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ.
ಕೊರೋನಾ ಹರಡುತ್ತಿರುವ ಹಿನ್ನೆಲೆ ಈ ಕುರಿತು ಮಾತನಾಡಿರುವ ಸಚಿವ ಬಿ.ಸಿ ಪಾಟೀಲ್, ಕೊರೊನಾದಿಂದ ಬಚಾವ್ ಆಗಲು ಸಾಮಾಜಿಕ ಅಂತರ ಕಡ್ಡಾಯ. ಮಾಸ್ಕ್ ಧರಿಸುವುದರ ಜೊತೆಗೆ ಜನತೆ ಎಚ್ಚೆತ್ತುಕೊಂಡಿರುವಂತೆ ಜನತೆಗೆ ಸೂಚಿಸಿದ್ದಾರೆ.
ಕೊರೊನಾ ಮಹಾಮಾರಿ ತಮ್ಮ ಮತಕ್ಷೇತ್ರಕ್ಕೂ ಲಗ್ಗೆಯಿಟ್ಟಿದ್ದು,ಕೋವಿಡ್-19 ಸಾಮೂದಾಯಿಕವಾಗಿ ಪಸರಿಸುತ್ತಿದೆ. ಕ್ಷೇತ್ರದ ಗ್ರಾಮೀಣ ಭಾಗಗಳಾದ ಗುಡ್ಡದಮಾದಾಪುರ, ಕೋಡ, ಸುತ್ಕೋಟೆ, ಎಮ್ಮಿಗನೂರು ಸೇರಿದಂತೆ ವಿವಿಧ ಭಾಗಗಳಿಗೂ ವ್ಯಾಪಿಸಿದೆ. ಪ್ರತಿಯೊಬ್ಬರ ಜೀವ ಅವರವರ ಕೈಯಲ್ಲಿಯಿದೆ. ಜನತೆ ಆದಷ್ಟು ಎಚ್ಚೆತ್ತುಕೊಂಡಿರಬೇಕು. ಯಾರಿಗಾದರೂ ಸೋಂಕು ತಗುಲಿದ ಶಂಕೆ ವ್ಯಕ್ತವಾದಲ್ಲಿ ಅಥವಾ ಶೀತ,ಜ್ವರ,ಕೆಮ್ಮಿನಂತಹ ಲಕ್ಷಣ ಕಂಡುಬಂದಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ತಪಾಸಣೆಗೊಳಪಡಬೇಕು. ಅಗತ್ಯವಿದ್ದಲ್ಲಿ ಮಾತ್ರ ಮನೆಯಿಂದ ಹೊರಬರಬೇಕು. ನಮ್ಮ ಜೀವಕ್ಕೆನಾವೇ ಹೊಣೆ.ಆದಷ್ಟು ಸುರಕ್ಷತಾ ಕ್ರಮ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಸಚಿವ ಬಿ.ಸಿ ಪಾಟೀಲ್ ಮನವಿ ಮಾಡಿದ್ದಾರೆ.
Key words: Agriculture Minister -BC Patil -appeals – Hirekeroor – seal down.