Exclusive news: KSOUಗೆ ಕೋರ್ಸ್ ಆರಂಭಿಸಲು ಹಸಿರು ನಿಶಾನೆ ನೀಡಿದ AICTE.

ಮೈಸೂರು, ಜುಲೈ 17, 2021 (www.justkannada.in): ಕೇಂದ್ರ ಶಿಕ್ಷಣ ಸಚಿವಾಲಯದ ಶಾಸನಬದ್ಧ ಅಂಗವಾದ, ನವ ದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ನಿರ್ವಹಣಾ ವಿಭಾಗದಡಿ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಕೋರ್ಸ್ ನಡೆಸಲು (ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್) ಅನುಮತಿಸಿದೆ.jk

ಮುಕ್ತ ಹಾಗೂ ದೂರಶಿಕ್ಷಣ ಮಾದರಿಯಡಿ ಎಂ.ಬಿ.ಎ. ಕೋರ್ಸ್ ನಡೆಸಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮಾನ್ಯತೆ ಪಡೆದಿರುವ ದೇಶದ ಏಕೈಕ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದು, 2021-22ನೇ ಸಾಲಿಗೆ ಮುಕ್ತ ಹಾಗೂ ದೂರಶಿಕ್ಷಣ ಕಲಿಕಾ ವಿಧಾನದಡಿ ಎಂ.ಬಿ.ಎ. ಕೋರ್ಸ್ ಗೆ (ಜನರಲ್ ಅಡ್ಮಿನಿಸ್ಟ್ರೇಷನ್) 10,000ಸೀಟುಗಳಿಗೆ ಪ್ರವೇಶಾತಿ ಕಲ್ಪಿಸಲು ಎಐಸಿಟಿಇ ಅನುಮತಿಸಿದೆ.

ಕುಲಪತಿ ಸಂತಸ..

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ತಾಂತ್ರಿಕ ಕೋರ್ಸ್ ಆರಂಭಿಸಲು ಎಐಸಿಟಿಇ ಅನುಮತಿ ನೀಡಿರುವುದಕ್ಕೆ ಕೆಎಸ್ ಒಯು ಕುಲಪತಿ ವಿದ್ಯಾಶಂಕರ್ ಸಂತಸ ವ್ಯಕ್ತಪಡಿಸಿದರು.  ಈ ಸಂಬಂಧ ಜಸ್ಟ್ ಕನ್ನಡ ಜತೆ ಮಾತನಾಡಿದ ಅವರು, ದೇಶಾದ್ಯಂತ ಒಟ್ಟು 18 ಮುಕ್ತ ವಿಶ್ವ ವಿದ್ಯಾನಿಲಯಗಳು ಕಾರ್ಯ ನಿರ್ವಹಿಸುತ್ತಿವೆ. ಈ ಪೈಕಿ ಎಐಸಿಟಿಇ ಇಂದ ಮಾನ್ಯತೆ ಪಡೆದ ದೇಶದ ಮೊದಲ ಮುಕ್ತ ವಿವಿ ಅದು ಕರ್ನಾಟಕ ರಾಜ್ಯ ಮುಕ್ತ ವಿವಿ ಎಂದು ಹೆಮ್ಮೆಯಿಂದ ಹೇಳಿದರು.

 

Keywords: AICTE- permits-KSOU- MBA- Open and Distance Education 10,000 seats