ಮುಂಬೈ,ನ,26,2019(www.justkannada.in): ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ರಾಜಕೀಯದಲ್ಲಿ ಇದೀಗ ಮತ್ತೊಂದು ಬೆಳವಣಿಗೆಯಾಗಿದ್ದು ಬಹುಮತ ಸಾಬೀತು ಪಡಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದ ಬೆನ್ನಲ್ಲೆ ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ ನೀಡಿದ್ದಾರೆ.
ಎನ್ ಸಿಪಿಯ ಅಜಿತ್ ಪವಾರ್ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಾವೀಸ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತೀಚೆಗೆ ಅಚ್ಚರಿಯ ಬೆಳವಣಿಗೆಯಲ್ಲಿ ರಾತ್ರೋರಾತ್ರಿ ಬಿಜೆಪಿ –ಎನ್ ಸಿಪಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯಾಗಿ ಬೆಳಿಗ್ಗೆಯಾಗುವಷ್ಟರಲ್ಲಿ ರಾಷ್ಟ್ರಪತಿ ಆಳ್ವಿಕೆ ವಾಪಸ್ ಪಡೆಯಲಾಗಿತ್ತು. ನಂತರ ದೇವೇಂದ್ರ ಫಡ್ನಾವಿಸ್ ಸಿಎಂ ಆಗಿ ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದ್ದರು.
ಇನ್ನು ಇದಕ್ಕೆ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ವಿರೋಧ ವ್ಯಕ್ತಪಡಿಸಿದ್ದರು. ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಎನ್ ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್ ರಿಟ್ ಅರ್ಜಿ ಸಲ್ಲಿಸಿದ್ದವು. ರಿಟ್ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನಾಳೆ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತುಪಡಿಸುವಂತೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಾವೀಸ್ ಗೆ ಆದೇಶಿಸಿದೆ.
ಇದೀಗ ಬಹುಮತ ಸಾಬೀತಿಗೂ ಮುನ್ನವೇ ಅಜಿತ್ ಪವಾರ್ ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಮಧ್ಯಾಹ್ನ 3.30ಕ್ಕೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಪಡ್ನಾವೀಸ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.
Key words: Ajit Pawar- resigns – Maharashtra –DCM-position