ಪ್ರಾಧ್ಯಾಪಕಿ ಡಾ.ವಿಜಯಲಕ್ಷ್ಮಿ ಮನಾಪುರ ಅವರಿಗೆ ‘ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ’ ನಾಳೆ ಪ್ರದಾನ

ಮೈಸೂರು,ಜನವರಿ,2,2025 (www.justkannada.in): ಮೈಸೂರು ಮಹಾರಾಜ ಕಾಲೇಜು ಪ್ರಾಧ್ಯಾಪಕಿ ಡಾ.ವಿಜಯಲಕ್ಷ್ಮಿ ಮನಾಪುರ ಅವರಿಗೆ ‘ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಒಲಿದಿದ್ದು, ನಾಳೆ ಪ್ರಶಸ್ತಿ ಪ್ರದಾನವಾಗಲಿದೆ.

ದಲಿತ ವಿದ್ಯಾರ್ಥಿ ಪರಿಷತ್  ಸಂಘಟನೆ ವತಿಯಿಂದ ಪ್ರತಿ ವರ್ಷದ ಜನವರಿ 03 ರಂದು ಮಾತೆ ಸಾವಿತ್ರಿಬಾಯಿ ಫುಲೆ ಅವರ ಜನ್ಮ ಜಯಂತಿ ಪ್ರಯುಕ್ತ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಕಲೆ ಸಾಹಿತ್ಯ, ಹೋರಾಟ, ಸಮಾಜ ಸೇವೆ ಅಲ್ಲದೇ ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ/ಮಾಡಿದ ಮಹಿಳಾ ಸಾಧಕಿಯರನ್ನು ಗುರುತಿಸಿ ಗೌರವಿಸುವ ರಾಜ್ಯ ಮಟ್ಟದ “ಅಕ್ಷರದವ್ವ ಸಾವಿತ್ರಿಬಾಯಿ ಪುಲೆ” ಪ್ರಶಸಿಯನ್ನು ನೀಡುತ್ತಾ ಬಂದಿದೆ. ಇದೀಗ  2024ರ ಸಾಲಿಗೆ ಕಾಲೇಜು ಪ್ರಾಧ್ಯಾಪಕಿ ಡಾ.ವಿಜಯಲಕ್ಷ್ಮಿ ಮನಾಪುರ ಅವರನ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಸಮಾರಂಭವು ಸಾವಿತ್ರಿಬಾಯಿ ಪುಲೆ ಅವರ ಜನ್ಮ ಜಯಂತಿ ದಿನವಾದ 03-01-2025 ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಜಯಪುರ (ಬಿಜಾಪುರ) ನಗರದ “ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ” ಏರ್ಪಡಿಸಲಾಗಿದೆ.

ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ್ ಟಿಯೋಲ ಮೆಚಡೊ ಪಾಲ ದಿವ್ಯ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನ, ಮಹಿಳಾ ಮತ್ತು ಮಕ್ಕಳ  ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟನೆ ಮಾಡಲಿದ್ದಾರೆ . ಮುಖ್ಯ ಅತಿಥಿಯಾಗಿ ಕಾಂತಾ ನಾಯಕ್ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮ , ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ, ವಿಜಯಪುರದ ಅಪರ ಜಿಲ್ಲಾಧಿಕಾರಿ  ಸೋಮಲಿಂಗ ಗೆಣ್ಣೂರ ಮುಂತಾದವರು ಮುಖ್ಯ ಅತಿಥಿಯಾಗಿ ಆಗಮಿಸುವವರು,

Key words: Professor, Dr. Vijayalakshmi Manapura, ‘Aksharadavva Savitribai Phule Award’