ಬೆಂಗಳೂರು, ಜುಲೈ,,29,2023(www.justkannada.in): ವಿಧಾನಸೌಧದ ಬಳಿ ಡ್ರೋನ್ ಹಾರಾಟಕ್ಕೆ ಯತ್ನಿಸಿದ ಇಬ್ಬರು ಯುವಕರ ವಿರುದ್ದ ಪ್ರಕರಣ ದಾಖಲಾಗಿದೆ.
ವಿಧಾನಸೌಧದ ಪೂರ್ವ ದ್ವಾರದ ಬಳಿ ಇಂದು ಡ್ರೋನ್ ಹಾರಾಟಕ್ಕೆ ಯತ್ನಿಸಿದ್ದ ಇಬ್ಬರು ಇವೆಂಟ್ ಮ್ಯಾನೇಜ್ಮೆಂಟ್ ಯುವಕರ ವಿರುದ್ಧ ಅತಿಕ್ರಮ ಪ್ರವೇಶ ಮತ್ತು ನಿರ್ಲಕ್ಷ್ಯ ಹಿನ್ನೆಲೆ ವಿಧಾನಸೌಧ ಠಾಣೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಅರುಣ್ ಮತ್ತು ವಿನೋದ್ ಎಂಬ ಯುವಕರನ್ನ ಪೊಲೀಸರು ವಶಕ್ಕೆ ಪಡೆದಿದ್ದರು. ಸದ್ಯ ಇಬ್ಬರಿಗೂ ಸ್ಟೇಷನ್ ಬೇಲ್ ನೀಡಿ ಕಳುಹಿಸಲಾಗಿದೆ.
ಖಾಸಗಿ ಕಂಪನಿಯೊಂದರ 15 ವರ್ಷಗಳ ಸಂಭ್ರಮಾಚರಣೆ ಹಿನ್ನೆಲೆ ವಿಧಾನಸೌಧದ ವಿಡಿಯೋ ಚಿತ್ರೀಕರಣಕ್ಕೆ ಇಬ್ಬರು ಯುವಕರು ಬಂದಿದ್ದರು. ಡ್ರೋನ್ ಹಾರಿಸುವುದು ನಿರ್ಬಂಧಿಸಿರುವ ವಿಚಾರ ತಿಳಿಯದೆ ಹಾರಿಸಲು ಯತ್ನಿಸಿದ್ದಾಗಿ ಪೊಲೀಸ್ ವಿಚಾರಣೆಯಲ್ಲಿ ತಿಳಿದುಬಂದಿದೆ.
Key words: Allegation -attempt – fly drone- near-Vidhan soudha- case – registered