ಬೆಂಗಳೂರು,ಆಗಸ್ಟ್,31,2020(www.justkannada.in): ರಾಜ್ಯದಲ್ಲಿ ಈಗಾಗಲೇ 1438 ಡ್ರಗ್ಸ್ ಕೇಸ್ ಗಳು ದಾಖಲಾಗಿ 1792 ಜನರನ್ನು ಬಂಧಿಸಲಾಗಿದೆ. ಕಾಲೇಜ್ ಗಳು ಪ್ರಾರಂಭವಾದ ತಕ್ಷಣ ಪ್ರಮುಖ ಸಂಘಟನೆಯೊಂದಿಗೆ ಜೊತೆಗೆ ಸೇರಿ ಡ್ರಗ್ಸ್ ವಿರುಧ್ಧ ಜಾಗೃತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಈ ಕುರಿತು ಟ್ವೀಟ್ ಮಾಡಿರುವ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕಾಗಿ ಇಂದು ಬೆಂಗಳೂರಿನಲ್ಲಿ ಹಿರಿಯ ಪೋಲಿಸ್ ಅಧಿಕಾರಿಗಳ ಸಭೆ ನಡೆಸಲಾಯಿತು. ಸಭೆಯಲ್ಲಿ ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಹಾವಳಿ ಕುರಿತು ಗಂಭೀರವಾಗಿ ಚರ್ಚಿಸಲಾಯಿತು. ಈಗಾಗಲೇ 1438 ಡ್ರಗ್ಸ್ ಕೇಸ್ ಗಳು ದಾಖಲಾಗಿ 1792 ಜನರನ್ನು ಬಂಧಿಸಲಾಗಿದೆ ಎಂದು ಹೇಳಿದರು.
ಹಾಗೆಯೇ ಮತ್ತೊಂದು ಟ್ವಿಟ್ ಮಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, CPBlr ಹಾಗೂ ಕೇಂದ್ರ ವಲಯದ ಐ ಜಿ ಇವರ ನೇತೃತ್ವದಲ್ಲಿ ಜಂಟಿ ತಂಡ ರಚನೆ. ವಿಸಾ ಅವಧಿ ಮುಗಿದ ಮೇಲು ಭಾರತದಲ್ಲಿ ಉಳಿದ ವಿದೇಶಿಗರನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸುವುದು, ಕಾಲೇಜ್ ಗಳು ಪ್ರಾರಂಭವಾದ ತಕ್ಷಣ ಪ್ರಮುಖ ಸಂಘಟನೆಯೊಂದಿಗೆ ಜೊತೆಗೆ ಸೇರಿ ಡ್ರಗ್ಸ್ ವಿರುಧ್ಧ ಜಾಗೃತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದ್ದಾರೆ.
Key words: Already -1438 drug cases – Home Minister- Basavaraja Bommai.