ಅನಗತ್ಯ ಕಾಯ್ದೆಗಳಿಗೆ ತಿದ್ದುಪಡಿ ತಂದು ಸುಗಮ ಆಡಳಿತಕ್ಕೆ ಕ್ರಮ- ಸಚಿವ ಎಸ್ ಟಿ  ಸೋಮಶೇಖರ್..

ಬೆಂಗಳೂರು,ಫೆಬ್ರವರಿ,19,2021(www.justkannada.in):  ಸಹಕಾರ ಇಲಾಖೆಯಲ್ಲಿ ಅನಗತ್ಯ ತೊಡಕನ್ನುಂಟು ಮಾಡುವ ಕಾನೂನುಗಳು, ಸುಗಮ ಆಡಳಿತಕ್ಕೆ ತೊಡಕಾಗುವ ಕಾಯ್ದೆಗಳಿದ್ದರೆ, ನನ್ನ ಅಥವಾ ಇಲಾಖೆ ಗಮನಕ್ಕೆ ತಂದರೆ ಅದನ್ನು ಈ ಬಾರಿ ಸದನದಲ್ಲಿ ಚರ್ಚೆಗೆ ತಂದು ತಿದ್ದುಪಡಿ ಮಾಡಲಾಗುವುದು ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.jk

ಬೆಂಗಳೂರು ನಗರದ ಕೆ.ಆರ್ ರಸ್ತೆ ಬಳಿಯ ಗಾಯನ ಸಮಾಜದಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾ ಕೇಂದ್ರ ಸಹಕಾರಿ (ಬಿ.ಡಿ.ಸಿ.ಸಿ.) ಬ್ಯಾಂಕ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾಲ ವಿತರಣಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಈಗಾಗಲೇ ಕೆಲವು ತೊಡಕುಗಳು ನನ್ನ ಗಮನಕ್ಕೆ ಬಂದಿದ್ದು, ಅವುಗಳ ತಿದ್ದುಪಡಿಗೆ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

21 ಡಿಸಿಸಿ ಬ್ಯಾಂಕ್ ಗಳಿಗೆ ಸರ್ಕಾರದ ಷೇರು

21 ಡಿಸಿಸಿ ಬ್ಯಾಂಕ್ ಗಳಿಗೆ ಸರ್ಕಾರದ ಷೇರು ಬಂಡವಾಳ ಹೂಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಪ್ರತಿ ಬ್ಯಾಂಕ್ ಗಳಿಗೆ ತಲಾ 10 ಲಕ್ಷ ರೂಪಾಯಿ ಹೂಡಿಕೆ ಮಾಡುವ ಚಿಂತನೆ ಇದ್ದು, ಶೀಘ್ರದಲ್ಲಿ ನಿರ್ಧಾರ ತಿಳಿಸಲಾಗುವುದು ಎಂದು ಸಚಿವ ಸೋಮಶೇಖರ್ ತಿಳಿಸಿದರು.

5 ಸಾವಿರ ಜನರಿಗೆ ಉದ್ಯೋಗ

ಹಾಲು ಒಕ್ಕೂಟ ಸೇರಿದಂತೆ ಹಲವು ಸಹಕಾರ ಇಲಾಖೆಯ ಅಂಗ ಸಂಸ್ಥೆಗಳಿಂದ ಕೋವಿಡ್ ಸಂದರ್ಭದಲ್ಲಿ 5 ಸಾವಿರ ಉದ್ಯೋಗ ಸೃಷ್ಟಿ ಮಾಡಬೇಕೆಂದು ಆದೇಶ ಕೊಟ್ಟಿದ್ದೆ. ಈಗ ಬೆಂಗಳೂರು ಹಾಲು ಒಕ್ಕೂಟದಿಂದ 279 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದೇ ರೀತಿ ಹಲವು ಕಡೆ ಒಂದೊಂದಾಗಿ ಹುದ್ದೆಗಳ ನೆಮಕಾತಿಗೆ ಅರ್ಜಿ ಆಹ್ವಾನಿಸಲಾಗುತ್ತದೆ ಎಂದು ಸಹಕಾರ ಸಚಿವ  ಸೋಮಶೇಖರ್ ತಿಳಿಸಿದರು.

ಎಲ್ಲ ಡಿಸಿಸಿ ಬ್ಯಾಂಕ್ ಗಳಿಗೆ ಭೇಟಿ

ಕೋವಿಡ್ 19ರ ಹಿನ್ನೆಲೆಯಲ್ಲಿ ಸಾಲ ಕೊಡಬೇಕು. ಈ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದವರಿಗೆ ಸಹಕಾರ ಕೊಡಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಸುತ್ತೋಲೆಯನ್ನು ಸಹ ಹೊರಡಿಸಿತ್ತು. ಎಲ್ಲ ದೃಷ್ಟಿಯನ್ನು ಇಟ್ಟುಕೊಂಡು ನಾನು ಎಲ್ಲ 21 ಡಿಸಿಸಿ ಬ್ಯಾಂಕ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.amendment-unnecessary-laws-action-administration-minister-s-t-somashekhar

ಈ ಬಾರಿ 24.50 ಲಕ್ಷ ರೈತರಿಗೆ 15300 ಕೋಟಿ ರೂಪಾಯಿ ಸಾಲ ವಿತರಣೆ ಮಾಡುವ ಗುರಿಯನ್ನು ಹಾಕಿಕೊಳ್ಳಲಾಗಿತ್ತು. ಈವರೆಗೆ 22,02,931 ಲಕ್ಷ ರೈತರಿಗೆ 13739.28 ಕೋಟಿ ರೂಪಾಯಿ ಸಾಲ ನೀಡಿದ್ದೇವೆ. ಮಾರ್ಚ್ 31ರೊಳಗೆ ನೂರಕ್ಕೆ ನೂರು ಗುರಿ ತಲುಪುವೆವು ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

2021-22ಕ್ಕೆ 20 ಲಕ್ಷ ಕೋಟಿ ರೂ. ಸಾಲ ವಿತರಣೆ ಗುರಿ

2021-22ನೇ ಸಾಲಿಗೆ 28 ಲಕ್ಷ ರೈತರಿಗೆ 20 ಲಕ್ಷ ಕೋಟಿ ರೂ. ಅಲ್ಪಾವಧಿ, ಮಧ್ಯಮಾವಧಿ ಸೇರಿದಂತೆ ಬೆಳೆ ಸಾಲ ವಿತರಣೆ ಗುರಿಯನ್ನು ಮುಖ್ಯಮಂತ್ರಿಗಳು ಹಾಕಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ಅನುದಾನಕ್ಕಾಗಿ ನಬಾರ್ಡ್ ಗೆ ಸಹ ಮನವಿ ಸಲ್ಲಿಸಲಾಗಿದೆ. ಇದರಿಂದ ಹೆಚ್ಚಿನ ರೈತರಿಗೆ ಅನುಕೂಲವಾಗಲಿದೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

ಡಿಸಿಸಿ ಬ್ಯಾಂಕ್ ಗಳಿಂದ ಉತ್ತಮ ಪ್ರಗತಿ

21 ಡಿಸಿಸಿ ಬ್ಯಾಂಕ್ ಗಳು ಉತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದು, ಬಡವರ ಬಂಧು, ಕಾಯಕ, ಎಸ್ಸಿ ಎಸ್ಟಿ ಯೋಜನೆಗಳು ಹೆಚ್ಚೆಚ್ಚು ಜನರಿಗೆ ತಲುಪುವಂತಾಗಬೇಕು. ಈ ನಿಟ್ಟಿನಲ್ಲಿ ಎಲ್ಲಾ ಡಿಸಿಸಿ ಬ್ಯಾಂಕ್ ಗಳು ಕಾರ್ಯನಿರ್ವಹಣೆ ಮಾಡುತ್ತಿವೆ. ಬಡವರ ಬಂಧು ಯೋಜನೆ ಯಡಿ ತುಮಕೂರು ಡಿಸಿಸಿ ಬ್ಯಾಂಕ್ ಅತ್ಯುತ್ತಮವಾಗಿ ಸಾಲ ವಿತರಣೆ ಮಾಡುತ್ತಿದ್ದು, ಉಳಿದ ಬ್ಯಾಂಕ್ ಗಳು ಉತ್ತಮ ಪ್ರಗತಿಯನ್ನು ಸಾಧಿಸಿವೆ ಇಂದು ಸಹಕಾರ ಸಚಿವರಾದ ಎಸ್ ಟಿ ಸೋಮಶೇಖರ್ ತಿಳಿಸಿದರು.

ಗುಲ್ಬರ್ಗ ಡಿಸಿಸಿ ಬ್ಯಾಂಕ್ ಹೊರತುಪಡಿಸಿ ಉಳಿದ ಎಲ್ಲ ಬ್ಯಾಂಕ್ ಗಳೂ ಸಹ ರೈತರಿಗೆ ಸಮರ್ಪಕವಾಗಿ ಸಾಲ ನೀಡುವ ಹಾಗೂ ಇನ್ನಿತರ ಯೋಜನೆಗಳನ್ನು ತಲುಪಿಸುವ ಕಾರ್ಯವನ್ನು ಮಾಡುತ್ತಿದ್ದು ಇದೀಗ ಗುಲ್ಬರ್ಗ ಡಿಸಿಸಿ ಬ್ಯಾಂಕ್ ಗೆ ಸುಮಾರು 200 ಕೋಟಿ ರೂಪಾಯಿ ಅನುದಾನವನ್ನು ನೀಡುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ ಈ ಮೂಲಕ ರೈತರಿಗೆ ಯೋಜನೆ ತಲುಪಲು ಸಾಧ್ಯವಾಗುತ್ತದೆ ಎಂದು ಸಹಕಾರ ಸಚಿವರಾದ ಎಸ್ ಟಿ ಸೋಮಶೇಖರ್ ಅವರು ತಿಳಿಸಿದರು.

ಬೆಂಗಳೂರು ಬಿಡಿಸಿಸಿ ಬ್ಯಾಂಕ್ ನಿಂದ ಉತ್ತಮ ಕಾರ್ಯ; ಸಚಿವರಾದ ಸೋಮಶೇಖರ್

ನಬಾರ್ಡ್ ನಿಂದ 1475 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದ್ದು, ಅದರಲ್ಲಿ  ಬಂದ ಅನುದಾನದಲ್ಲಿ 85 ಕೋಟಿ ರೂ.ವನ್ನು ಇಲ್ಲಿನ ಬಿಡಿಸಿಸಿ ಬ್ಯಾಂಕ್ ಗೆ ನೀಡಿದ್ದೇವೆ. ಈ ಹಣದಲ್ಲಿ ಸೂಕ್ತ ಅರ್ಹ ಫಲಾನುಭವಿಗಳಿಗೆ ಸಾಲಗಳನ್ನು ನೀಡುವ ಮೂಲಕ ಎಲ್ಲರಿಗೂ ನೀರಿನ ಕಲ್ಪಿಸುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಪ್ರಶಂಸೆ ವ್ಯಕ್ತಪಡಿಸಿದರು.

ಆರ್ಥಿಕ ಸ್ಪಂದನ ಕಾರ್ಯಕ್ರಮದ ಸಮರ್ಪಕ ಅನುಷ್ಠಾನ

ಕೇಂದ್ರ ಸರ್ಕಾರದ ಯೋಜನೆಯಡಿ ಚಾಲನೆ ನೀಡಲಾಗಿರುವ ಆರ್ಥಿಕ ಸ್ಪಂದನ ಕಾರ್ಯಕ್ರಮಕ್ಕೆ ಬೆಂಗಳೂರಿನಲ್ಲಿ ಇತ್ತೀಚೆಗಷ್ಟೆ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಅವರು ಚಾಲನೆ ನೀಡಿದರು. ಬೆಂಗಳೂರು ಮೈಸೂರು ಕಲಬುರಗಿ ಹಾಗೂ ಬೆಳಗಾವಿ ವಿಭಾಗಗಳ ಮೂಲಕ 39,300 ಕೋಟಿ ರೂಪಾಯಿ ಸಾಲ ವಿತರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಈ ಎಲ್ಲ ಕಡೆ ಈಗ ಎರಡನೇ ಹಂತದಲ್ಲಿ ಸಾಲ ವಿತರಣೆ ಮಾಡುತ್ತಿರುವುದು ಸಂತಸದ ವಿಚಾರವಾಗಿದೆ. ಬಿಡಿಸಿಸಿ ವತಿಯಿಂದ ಈ ಕಾರ್ಯಕ್ರಮದಲ್ಲಿ ಸುಮಾರು 45 ಕೋಟಿ ರೂಪಾಯಿ ಸಾಲವನ್ನು ನೀಡಲಾಗುತ್ತಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಆಶಾ ಕಾರ್ಯಕರ್ತೆಯರಿಗೆ ನೂರಕ್ಕೆ ನೂರು ಪ್ರೋತ್ಸಾಹ ಧನ ವಿತರಣೆ

ತರುಣ ಸಂಕಷ್ಟ ಕಾಲದಲ್ಲಿ ವಾರಿಯರ್ಸ್ ಗಳಂತೆ ದುಡಿದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ನೀಡಬೇಕೆಂಬ ಮುಖ್ಯಮಂತ್ರಿಗಳ ಆಶಯವನ್ನು ನೂರಕ್ಕೆ ನೂರು ಅನುಷ್ಠಾನಗೊಳಿಸುವಲ್ಲಿ ನಮ್ಮ ಸಹಕಾರ ಇಲಾಖೆ ಯಶಸ್ವಿಯಾಗಿದೆ. ಲಾಭದಲ್ಲಿರುವ ಸಹಕಾರ ಸಂಸ್ಥೆಗಳ ಮೂಲಕ ಕೊರೋನಾ ವಾರಿಯರ್ಸ್ ಗಳಾದ 42608 ಆಶಾ ಕಾರ್ಯಕರ್ತೆರಿಗೆ ತಲಾ 3 ಸಾವಿರದಂತೆ 12.75 ಕೋಟಿ ರೂಪಾಯಿ ಪ್ರೋತ್ಸಾಹಧನ ನೀಡಿದ್ದೇವೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರು ತಿಳಿಸಿದರು.

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 53 ಕೋಟಿ ರೂಪಾಯಿ ದೇಣಿಗೆ

ಕೋವಿಡ್  ಸಂಕಷ್ಟದ ಕಾಲದಲ್ಲಿ ಮುಖ್ಯಮಂತ್ರಿಗಳು ಎಲ್ಲ ಇಲಾಖೆಗಳಿಂದ ದೇಣಿಗೆ ನೀಡುವಂತೆ ಸೂಚಿಸಿದ್ದರು ಈ ಹಿನ್ನೆಲೆಯಲ್ಲಿ ಸಹಕಾರ ಇಲಾಖೆಯ ವತಿಯಿಂದ ಲಾಭದಲ್ಲಿರುವ ಸಹಕಾರ ಸಂಸ್ಥೆಗಳು ಹಾಗೂ ಎಪಿಎಂಸಿಗಳ ಮೂಲಕ ದೇಣಿಗೆ ಸಂಗ್ರಹಿಸಿ 53 ಕೋಟಿ ರುಪಾಯಿಗಳ ನಿಧಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದೇವೆ ಎಂದು ಸಚಿವ ಎಸ್,ಟಿ ಸೋಮಶೇಖರ್ ಮಾಹಿತಿ ನೀಡಿದರು .

ಏಕರೂಪ ಸಾಫ್ಟ್‌ವೇರ್ ತರುವ ಚಿಂತನೆ

ಅಪೆಕ್ಸ್ ಬ್ಯಾಂಕ್, 21 ಡಿಸಿಸಿ ಬ್ಯಾಂಕ್ ಗಳು ಹಾಗೂ ಎಲ್ಲ ಪ್ಯಾಕ್ಸ್ ಗಳ ಮೂಲಕ ಸರ್ಕಾರದ ಯೋಜನೆಗಳನ್ನು ಈಗಾಗಲೇ ತಲುಪಿಸಲಾಗುತ್ತಿದೆ. ಇಲ್ಲಿ ಪಾರದರ್ಶಕ ಆಡಳಿತವನ್ನು ನೀಡುವ ಸಲುವಾಗಿ ಎಲ್ಲ ಡೇಟಾಗಳನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಏಕರೂಪ ಸಾಫ್ಟ್ವೇರ್ ತರುವ ಚಿಂತನೆ ನಡೆಸಲಾಗಿದ್ದು, ಈಗಾಗಲೇ 2- 3ಸುತ್ತಿನ ಸಭೆಗಳನ್ನು ನಡೆಸಲಿದ್ದೇವೆ ಎಂದು ಸಹಕಾರ ಸಚಿವರಾದ ಎಸ್ ಟಿ ಸೋಮಶೇಖರ್ ಅವರು ತಿಳಿಸಿದರು.

ಒಂದು ಪಂಚಾಯಿತಿಗೊಂದು ಒಂದೊಂದು ಪ್ಯಾಕ್ಸ್

ಸರ್ಕಾರದ ಯೋಜನೆಗಳು ಜನರ ಬಳಿಗೆ ಹೋಗಬೇಕು. ಪ್ರತಿ ಹಳ್ಳಿಗೂ ಮುಟ್ಟಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಪ್ರತಿ ಪಂಚಾಯಿತಿಗೆ ಒಂದು ಪ್ಯಾಕ್ಸ್   ಸ್ಥಾಪನೆಗೊಳಿಸುವ ಉದ್ದೇಶವನ್ನು ಹೊಂದಿದ್ದೇವೆ. ಈಗಾಗಲೇ ಪೈಲಟ್ ಯೋಜನೆಗೆ ತುಮಕೂರಿನಲ್ಲಿ ಸ್ಥಾಪಿಸಲಾಗಿದ್ದು, ಅಗತ್ಯ ಇರುವ ಕಡೆ ರಾಜ್ಯಾದ್ಯಂತ ವಿಸ್ತರಣೆ ಮಾಡಲು ಮುಖ್ಯಮಂತ್ರಿಗಳು ಶೀಘ್ರದಲ್ಲಿ ನಿರ್ಧಾರವನ್ನು ಕೈಗೊಂಡು ಘೋಷಣೆ ಮಾಡಲಿದ್ದಾರೆಂದು ಸಚಿವರಾದ ಸೋಮಶೇಖರ್ ಅವರು ತಿಳಿಸಿದರು.

ಅವ್ಯವಹಾರ ಬೇಡ, ಜನರ ನಂಬಿಕೆ ಪಡೆಯಿರಿ

ಸಹಕಾರ ಸಂಸ್ಥೆಗಳ ಮೇಲೆ ಜನರು ನಂಬಿಕೆ ಇಟ್ಟು ಕೋಟ್ಯಂತರ ರೂಪಾಯಿ ಬಂಡವಾಳವನ್ನು ಹೂಡಿರುತ್ತಾರೆ, ಠೇವಣಿ ಇಟ್ಟಿರುತ್ತಾರೆ. ಅವರ ನಂಬಿಕೆಗೆ ಯಾವತ್ತೂ ಚ್ಯುತಿ ಬಾರದಂತೆ ನಡೆದುಕೊಳ್ಳಬೇಕು. ಕೆಲವು ಡಿಸಿಸಿ ಬ್ಯಾಂಕ್ ಗಳಲ್ಲಿ ಯಾವುದೇ ದಾಖಲೆಗಳನ್ನು ಪರಿಶೀಲಿಸದೆ, ಸಹಕಾರ ಇಲಾಖೆ ಅದನ್ನು ತಿರಸ್ಕರಿಸಿದರೂ ಸಹ, ಅಲ್ಲದೆ ಆಡಳಿತ ಮಂಡಳಿಯಲ್ಲಿಯೂ ಚರ್ಚೆಗೂ ತಾರದೆ ಸಕ್ಕರೆ ಕಾರ್ಖಾನೆಗಳಿಗೆ ಸಾಲಗಳನ್ನು ನೀಡಿ ಕೋಟ್ಯಂತರ ರೂಪಾಯಿ ಅವ್ಯವಹಾರವನ್ನು ನಡೆಸಲಾಗಿರುತ್ತದೆ. ಇನ್ನೂ ಕೆಲವು ಕಡೆ ನಕಲಿ ಚಿನ್ನವನ್ನು ಇಟ್ಟು ಸಾಲವನ್ನು ಕೊಟ್ಟಿರುತ್ತಾರೆ. ಇಂಥ ಅವ್ಯವಹಾರಗಳು ನಿಲ್ಲಬೇಕು. ಇದಕ್ಕಾಗಿ 29ಸಿ ಅಡಿಯಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ನಾವು ಮುಂದಾಗಿದ್ದೇವೆ ಹಲವು ತೆರಿಗೆಗಳನ್ನು ಕೈಗೊಂಡಿದ್ದೇವೆ ಎಂದು ಸಚಿವರು ತಿಳಿಸಿದರು.

ಸಹಕಾರ ಸಂಘಗಳ ಮೇಲೆ ಜನ ನಂಬಿಕೆ ಇಟ್ಟು ಕೋಟ್ಯಂತರ ರೂಪಾಯಿ ಹಣವನ್ನು ಠೇವಣಿ ಇಟ್ಟಿರುತ್ತಾರೆ. ಹೀಗಾಗಿ ಸಾರ್ವಜನಿಕರ ಹಣಕ್ಕೆ ಯಾವುದೇ ಮೋಸವಾಗಕೂಡದು. ಪಾರದರ್ಶಕ ಆಡಳಿತ ನೀಡಿದ ಜನರ ನಂಬಿಕೆಗಳಿಗೆ ಎಂದು ಸಚಿವರು ಸಲಹೆ ನೀಡಿದರು.

ವೆಬ್‌ಸೈಟ್ ಅನಾವರಣ

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ವೆಬ್‌ಸೈಟ್ ಅನ್ನು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಅನಾವರಣಗೊಳಿಸಿದರು. ಜೊತೆಗೆ ವೆಬ್‌ಸೈಟ್ ನಲ್ಲಿ ಅಳವಡಿಸಲಾಗಿರುವ ಸಾಲ ವಿತರಣೆ, ಸೌಲಭ್ಯ, ಸೇವೆಗಳು ಸೇರಿದಂತೆ ಇನ್ನಿತರ ಮಾಹಿತಿಗಳನ್ನು ಅಧಿಕಾರಿಗಳಿಂದ ಪಡೆದುಕೊಂಡರು.

ಆನ್‌ಲೈನ್ ಸೇವೆಗೆ ಒತ್ತು; ಡಿ.ಹನುಮಂತಯ್ಯ

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಡಿ.ಹನುಮಂತಯ್ಯ, ಬೆಂಗಳೂರು ಡಿಸಿಸಿ ಬ್ಯಾಂಕ್ ಗೆ 66 ವರ್ಷಗಳ ಇತಿಹಾಸವಿದ್ದು, 31 ಶಾಖೆಗಳಿವೆ. ಎಲ್ಲ ಶಾಖೆಗಳಲ್ಲಿಯೂ ಆನ್ ಲೈನ್ ಸೇವೆ ಇದ್ದು, ನೆಫ್ಟ್ ಸೇವೆಯನ್ನು ಸದ್ಯದಲ್ಲಿಯೇ ನೀಡಲಾಗುವುದು. ಹಾಲಿ 6 ಶಾಖೆಗಳಲ್ಲಿ ಎಟಿಎಂ ಸೌಲಭ್ಯವನ್ನು ನೀಡಲಾಗಿದ್ದು, ಶೀಘ್ರದಲ್ಲಿಯೇ ಎಲ್ಲ ಕಡೆಯೂ ಎಟಿಎಂ ಸೌಲಭ್ಯ ಲಭಿಸುವಂತಾಗಲು ಕ್ರಮ ವಹಿಸಲಾಗುವುದು. ಜೊತೆಗೆ ಪ್ಯಾಕ್ಸ್ ಗಳು ಮತ್ತಷ್ಟು ಜನಸ್ನೇಹಿಯಾಗಲು ಕ್ರಮವಹಿಸುತ್ತೇವೆ  ಎಂದು ತಿಳಿಸಿದರು.

ದೇಶವ್ಯಾಪ್ತಿ ತೀವ್ರಗತಿಯಲ್ಲಿ ಹರಡಿದ ಕೋವಿಡ್-19 ವೈರಸ್‌ನಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದ್ದು, ಈ ವರ್ಗದವರಿಗೆ ಆರ್ಥಿಕ ಸೌಲಭ್ಯವನ್ನು ಕಲ್ಪಸುವ ಉದ್ದೇಶದಿಂದ ಬ್ಯಾಂಕಿನ ವ್ಯಾಪ್ತಿಯ 3 ಜಿಲ್ಲೆಗಳ ಹೊಸ ರೈತ ಸದಸ್ಯರಿಗೆ ಕೆ.ಸಿ.ಸಿ.ಅಲ್ಪಾವಧಿ ಬೆಳೆಸಾಲ ರೂ.85 ಕೋಟಿ ರೂಪಾಯಿಗಳು ನಬಾರ್ಡ್‌ನಿಂದ ಮಂಜೂರಾಗಿದ್ದು, ಸದರಿ ಸಾಲ ವಿತರಣೆ ಮತ್ತು ನಬಾರ್ಡ್ ಸಹಾಯಧನದೊಂದಿಗೆ ಪ್ಯಾಕ್ಸ್‌ಗಳನ್ನು ಬಹು ಸೇವಾ ಕೇಂದ್ರಗಳನ್ನಾಗಿ ಪರಿವರ್ತಿಸುವ ಸಂಬಂಧ ಸಾಲ ನೀಡುವುದು ಹಾಗೂ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ರಾಜ್ಯದಲ್ಲಿನ ರೈತರುಗಳಿಗೆ ನೀಡುತ್ತಿರುವ ಕೆ.ಪಿ.ಸಿ ಸಾಲದ ಮಾದರಿಯಲ್ಲಿ ಹಾಲು ಉತ್ಪಾದಕ ರೈತ ಸದಸ್ಯರುಗಳಿಗೆ ಕೆ.ಸಿ.ಸಿ ಹೈನುಗಾರಿಕೆ ಸಾಲ ಯೋಜನೆಯನ್ನು ರಾಜ್ಯ ಸರ್ಕಾರದ ಆದೇಶದಂತೆ ಬ್ಯಾಂಕಿನಿಂದ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

Key words: Amendment – unnecessary laws – action – administration- Minister -S T Somashekhar.