ಬೆಂಗಳೂರು, ಸೆಪ್ಟೆಂಬರ್ 26, 2021 (www.justkannada.in): ಕೇಂದ್ರ ಸರಕಾರ ಸದ್ಯದಲ್ಲೇ ಹೊಸ ಸಹಕಾರ ನೀತಿಯನ್ನು ಜಾರಿಗೆ ತರಲಿದೆ ಎಂದು ಸಹಕಾರ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ದಿಲ್ಲಿಯಲ್ಲಿ ನಡೆದ ಮೊದಲ ರಾಷ್ಟ್ರೀಯ ಸಹಕಾರ ಸಮ್ಮೇಳನದಲ್ಲಿ ಮಾತನಾಡಿದ ಅಮಿತ್ ಶಾ, ದೇಶದ ಆರ್ಥಿಕತೆಯನ್ನು ಬಲಪಡಿಸುವ ಮತ್ತು 5 ಶತಕೋಟಿ ಡಾಲರ್ ಆರ್ಥಿಕತೆಯನ್ನಾಗಿ ಮಾಡುವ ಸಲುವಾಗಿ ಹೊಸ ಸಹಕಾರ ನೀತಿ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.
ಸಹಕಾರ ಆಂದೋಲನ ಗಟ್ಟಿಗೊಳಿಸುವ ನಿಟ್ಟಿನಲ್ಲಿ ರಾಜ್ಯಗಳ ಜತೆಗೆ ಕೆಲಸ ಮಾಡುವುದಾಗಿ ಹೇಳಿದ್ದಾರೆ. ಈ ಸಮ್ಮೇಳನದಲ್ಲಿ ವಿವಿಧ ರಾಜ್ಯಗಳ ಸಹಕಾರ ಸಚಿವರು, 2,100 ಪ್ರತಿನಿಧಿಗಳು ಮತ್ತು 6 ಕೋಟಿ ಮಂದಿ ಆನ್ಲೈನ್ನಲ್ಲಿ ಭಾಗಿಯಾಗಿದ್ದರು.
ಸದ್ಯ ದೇಶದಲ್ಲಿ 65 ಸಾವಿರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿವೆ. ಇದನ್ನು ಮುಂದಿನ 5 ವರ್ಷಗಳಲ್ಲಿ ಇದನ್ನು 3 ಲಕ್ಷಕ್ಕೆ ಏರಿಸುವ ಗುರಿಯಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
key words: Amit Shah announces new co-operation policy