ಬೆಂಗಳೂರು, ಜುಲೈ 26, 2023 (www.justkannada.in): ವಿಪಕ್ಷ ನಾಯಕರುಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪತ್ರ ಬರೆದು ಸುಗಮ ಕಲಾಪ ನಡೆಸಲು ಅನುವು ಮಾಡಿಕೊಡುವಂತೆ ಕೋರಿದ್ದಾರೆ.
ಉಭಯ ಸದನಗಳಲ್ಲಿ ಮಣಿಪುರ ಸಂಘರ್ಷ ಚರ್ಚೆಗೆ ಅವಕಾಶ ನೀಡುವುದಾಗಿ ಇಬ್ಬರು ವಿಪಕ್ಷ ನಾಯಕರುಗಳಿಗೆ ಅಮಿತ್ ಶಾ ತಿಳಿಸಿದ್ದಾರೆ.
ಸರ್ಕಾರವು ಚರ್ಚೆಗೆ ಸಿದ್ಧವಾಗಿದೆ ಮತ್ತು ಎಲ್ಲಾ ಪಕ್ಷಗಳ ಸಹಕಾರವನ್ನು ಕೋರುತ್ತದೆ. ಮಣಿಪುರದ ಸಮಸ್ಯೆಯನ್ನು ಚರ್ಚಿಸಲು ಸರ್ಕಾರ ಸಿದ್ಧವಾಗಿದೆ. ಇದಕ್ಕಾಗಿ ಎಲ್ಲ ಪಕ್ಷಗಳ ಸಹಕಾರವನ್ನು ಕೋರುತ್ತಿದ್ದೇವೆ. ಈ ಮಹತ್ವದ ಸಮಸ್ಯೆ ಬಗೆಹರಿಸಲು ಎಲ್ಲ ಪಕ್ಷಗಳು ಸಹಕರಿಸುತ್ತವೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.
ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಮಿತ್ ಶಾ ಪತ್ರ ಬರೆದಿದ್ದು, ಈ ಕುರಿತು ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.