ಹುಬ್ಬಳ್ಳಿ,ಜನವರಿ,8,2021(www.justkannada.in): ಜನವರಿ 16 ಮತ್ತು 17 ರಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದು ಈ ವೇಳೆ ಸಚಿವ ಸಂಪುಟ ವಿಸ್ತರಣೆ ಸಂಬಂಧ ಚರ್ಚೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಈ ಕುರಿತು ಸಚಿವಾಕಾಂಕ್ಷಿಗಳಿಗೆ ಶಾಕ್ ಆಗುವ ಸುದ್ದಿಯನ್ನ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹೌದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜ್ಯ ಭೇಟಿಗೂ ಸಚಿವ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ. ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ವರಿಷ್ಠರ ಜತೆ ಮಾತನಾಡುತ್ತಾರೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಇನ್ನು ವಂಚಕ ಯುವರಾಜ್ ಬಂಧನ ಕುರಿತು ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಯುವರಾಜ್ ಬಂಧನವಾಗಿದೆ. ರಾಜಕೀಯ ವ್ಯಕ್ತಿಗಳ ನಂಟು ಇದ್ದರೇ ತನಿಖೆಯಾಗಲಿ. ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ ಎಂದರು.
Ke words: Amit Shah’s- visit -cabinet expansion-Union Minister -Prahlad Joshi.