ಹೈದರಾಬಾದ್,ಸೆಪ್ಟಂಬರ್,2,2024 (www.justkannada.in): ಆಂಧ್ರಪ್ರದೇಶ ಮತ್ತು ತೆಲಂಗಾಣ ಭಾರಿ ಮಳೆಗೆ ಜನರು ತತ್ತರಿಸಿದ್ದು, ಉಭಯ ರಾಜ್ಯಗಳಲ್ಲಿ ಒಟ್ಟು 27 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಭಾರಿ ಮಳೆಯಿಂದ ಲಕ್ಷಾಂತರ ಜನರು ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದು, ಮಳೆಯಿಂದಾಗಿ ಆಂಧ್ರ ಪ್ರದೇಶ, ತೆಲಂಗಾಣದಲ್ಲಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಹೈದರಾಬಾದ್- ವಿಜಯವಾಡ ನಡುವೆ ರೈಲು ಸಂಚಾರ ಬಂದ್ ಆಗಿದೆ. 80ಕ್ಕೂ ಹೆಚ್ಚು ರೈಲುಗಳು ಹಾಗೂ 500 ಕ್ಕೂ ಹೆಚ್ಚು ಬಸ್ ಗಳ ಸಂಚಾರವನ್ನ ಬಂದ್ ಮಾಡಲಾಗಿದೆ.
ಇನ್ನು ನದಿಗಳು ಉಕ್ಕಿ ಹರಿಯುತ್ತಿದ್ದು, ಸಾವಿರಾರು ಜನರನ್ನು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಗಳು ಪ್ರವಾಹ ಪೀಡಿತ ಪ್ರದೇಶಗಳಿಂದ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕೇಂದ್ರ ಸರ್ಕಾರದಿಂದ ಪಡೆಯಬಹುದಾದ ಎಲ್ಲ ಸಹಾಯದ ಭರವಸೆ ನೀಡಿದ್ದಾರೆ.
Key words: Andra, Telangana, rain, 27 dead