ಧಾರವಾಡ, ಸೆಪ್ಟೆಂಬರ್ 15,2023(www.justkannada.in): ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಠರಾವಿಗೆ ತಡೆಯಾಜ್ಞೆ ಕೋರಿ ಅಂಜುಮನ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಹೈಕೋರ್ಟ್ ಅನುಮತಿ ನೀಡಿದೆ.
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಐದು ವರ್ಷಗಳ ಅನುಮತಿಗೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಠರಾವು ಪಾಸ್ ಮಾಡಿತ್ತು. ಇದನ್ನು ವಿರೋಧಿಸಿದ ಅಂಜುಮನ್ ಸಂಸ್ಥೆ, ಹುಬ್ಬಳ್ಳಿ-ಧಾರವಾಡ ಪಾಲಿಕೆ ಠರಾವಿಗೆ ತಡೆಯಾಜ್ಞೆ ನೀಡುವಂತೆ ಧಾರವಾಡ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ಇಂದು ಈ ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಕೋರ್ಟ್, ಅಂಜುಮನ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ ಪಾಲಿಕೆ ಆಯುಕ್ತರಿಗೆ ಅರ್ಜಿ ಸಲ್ಲಿಸಿ ಎಂದು ಸೂಚನೆ ನೀಡಿದೆ.
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ 3 ದಿನ ಗಣೇಶಮೂರ್ತಿ ಪ್ರತಿಷ್ಟಾಪನೆಗೆ ಅವಕಾಶ ನೀಡಲಾಗಿದೆ. ಅನುಮತಿ ಸಿಗುತ್ತಿದ್ದಂತೆ ಹಿಂದೂಪರ ಸಂಘಟನಾ ಕಾರ್ಯಕರ್ತರು ಪಾಲಿಕೆ ಎದುರು ಗಣೇಶಮೂರ್ತಿ ಹೊತ್ತಿ ಸಂಭ್ರಮಿಸಿದರು.
Key words: Anjuman organization –petition- dismisses -Permission -Ganesha –festival- Idga Maidan