ಬೆಂಗಳೂರು,ಆಗಸ್ಟ್,4,2021(www.justkannada.in): ಬಾಕಿ ಇರುವ ಪಾಲಿಕೆ ನಗರ ಸಭೆಗಳ ಚುನಾವಣೆ ಘೋಷಿಸಿ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿರುವ ಹೈಕೋರ್ಟ್, ಶೀಘ್ರವೇ ಚುನಾವಣಾ ವೇಳಾ ಪಟ್ಟಿ ಪ್ರಕಟಿಸುವಂತೆ ತಿಳಿಸಿದೆ. ಬೆಳಗಾವಿ, ಹುಬ್ಬಳ್ಳಿ ಧಾರವಾಡ, ಕಲ್ಬುರ್ಗಿ, ತರಿಕೆರೆ ಮುಂತಾದ ಕಡೆಗಳಲ್ಲಿ ಚುನಾವಣೆ ನಡೆದಿಲ್ಲ ಎಂದಿದೆ.
ಕೊರೋನಾ ಹಿನ್ನೆಲೆ ಡಿಸೆಂಬರ್ ಅಂತ್ಯದವರೆಗೆ ಚುನಾವಣೆ ನಡೆಸದಂತೆ ರಾಜ್ಯ ಸರ್ಕಾರ ಮನವಿ ಮಾಡಿದ್ದು, ಈ ಮನವಿಯನ್ನ ಚುನಾವಣಾ ಆಯೋಗ ಪರಿಗಣಿಸಬೇಕಿಲ್ಲ. ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆದಿದೆ. ಕರ್ನಾಟಕದಲ್ಲಿ ಮಾತ್ರ ಮುಂದೂಡಿಕೆ ಮಾಡುವುದೇಕೆ ಎಂದು ಹೈಕೋರ್ಟ್ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದೆ.
ಸಂವಿಧಾನದ ಆಶಯ ಪಾಲನೆಯಾಗುತ್ತಿಲ್ಲ. ಎಲ್ಲಾ ಧಾರ್ಮಿಕ ಕೇಂದ್ರಗಳನ್ನ ತೆರೆಯಲಾಗಿದೆ. ಸಾರ್ವಜನಿಕರು ಕ್ಯೂನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ. ಹಾಗೆಯೇ ಚುನಾವಣೆ ಮಾಡಲು ಸಾಧ್ಯವಲ್ಲವೇ ಎಂದು ಹೈಕೋರ್ಟ್ ಪ್ರಶ್ನಿಸಿದೆ.
Key words: Announce -election – pending- City Council –elections-High Court -notice.