ಬೆಂಗಳೂರು,ಜೂ,29,2020(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಮಹಾಮಾರಿಗೆ ಇಂದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ 41 ವರ್ಷದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಗೆ ಕೊರೋನಾ ಟೆಸ್ಟ್ ಮಾಡಲಾಗಿತ್ತು. ಈ ವೇಳೆ ವ್ಯಕ್ತಿಗೆ ಕೊರೋನಾ ದೃಢಪಟ್ಟಿತ್ತು. ಜೂನ್ 26 ರಂದು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ವ್ಯಕ್ತಿ ದಾಖಲಾಗಿದ್ದರು.
ಇನ್ನೊಂದೆಡೆ ನಗರದ ತಿಲಕ್ ನಗರದ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪೊಲೀಸ್ ಸಿಬ್ಬಂದಿಯ ಸಂಪರ್ಕದಲ್ಲಿದ್ದ ಐವರನ್ನ ಕ್ವಾರಂಟೈನ್ ಮಾಡಲಾಗಿದೆ.
Key words: Another -victim – Corona – Bangalore- Positive -police