ನವದೆಹಲಿ,ಮೇ,1,2021(www.justkannada.in): ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು ಈ ಮಧ್ಯೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ವಿಸ್ತರಿಸಲಾಗಿದೆ.
ಈ ಕುರಿತು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ. ನವದೆಹಲಿಯಲ್ಲಿ ಹೆಚ್ಚುತ್ತಿರುವ ಕೊರೋನಾ ತಡೆಗಾಗಿ ಮತ್ತೊಂದು ವಾರ್ ಲಾಕ್ ಡೌನ್ ವಿಸ್ತರಣೆ ಮಾಡಿ ಅರವಿಂದ ಕೇಜ್ರಿವಾಲ್ ಆದೇಶಿಸಿದ್ದಾರೆ. ಮೇ10ರವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ ಎನ್ನಲಾಗಿದೆ.
ಕಳೆದ ಮೂರು ವಾರಗಳಿಂದ ಕೋವಿಡ್ -19 ಪ್ರಕರಣಗಳಲ್ಲಿ ಏರಿಕೆಯ ಮಧ್ಯೆ ಕೇಜ್ರಿವಾಲ್ ಲಾಕ್ಡೌನ್ಗೆ ಆಶ್ರಯಿಸಿದ್ದಾರೆ.
Key words: Another –week- lockdown -extension – New Delhi.