ಬೆಂಗಳೂರು,ಸೆಪ್ಟೆಂಬರ್,22,2020(www.justkannada.in) : ರೈತ ವಿರೋಧಿ ಬಿಲ್ ಖಂಡಿಸಿ ಸೆ.25ಕ್ಕೆ ಭಾರತ್ ಬಂದ್ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಚರ್ಚಿಸಿ ತೀರ್ಮಾನ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.
ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ರೈತರ ಪ್ರತಿಭಟನೆಗೆ ಸರ್ಕಾರ ಕ್ಯಾರೆ ಎನ್ನುತ್ತಿಲ್ಲ. ಸರ್ಕಾರ ಜಾರಿಗೆ ತರಲು ಹೊರಟಿರುವ ಕಾಯ್ದೆಗಳು ರೈತರಿಗೆ ಮಾರಕ. ಈ ಮೂಲಕ ರೈತರ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರಯತ್ನವಾಗುತ್ತಿದೆ. ಜತೆಗೆ ಭೂ ಸುಧಾರಣಾ ಕಾಯ್ದೆ ತಿದ್ಧುಪಡಿ ಜಾರಿ ಮಾಡಿ ಕಾರ್ಪೋರೇಟ್ ವಲಯ ಬೆಳೆಸಲು ಮುಂದಾಗಿದೆ. ಹೀಗಾಗಿ ರೈತ ವಿರೋಧಿ ಕಾಯ್ದೆಗಳನ್ನು ಸರ್ಕಾರ ಕೈ ಬಿಡಬೇಕು ಎಂದು ಆಗ್ರಹಿಸಿದರು.
ಹಾಗೆಯೇ ರೈತ ವಿರೋಧಿ ಬಿಲ್ ಖಂಡಿಸಿ ಸೆಪ್ಟಂಬರ್ 25ಕ್ಕೆ ಭಾರತ್ ಬಂದ್ ಬಗ್ಗೆ ವಿವಿಧ ಸಂಘಟನೆಗಳ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.
Key words: Anti-farmer- bill-protest-sep 5- Decide-farmer leader- Kodihalli chandrashekar