ಬೆಂಗಳೂರು,ಆಗಸ್ಟ್,18,2023(www.justkannada.in): ಎಪಿಎಲ್, ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅನುಮತಿ ಇಲ್ಲ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅನುಮತಿ ಇಲ್ಲ. ಎಪಿಎಲ್, ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ನಾವೇ ಪೋರ್ಟಲ್ ಓಪನ್ ಮಾಡಿಲ್ಲ. ಏನು ಕಾರಣ ಅಂತ ಸದ್ಯದರಲ್ಲೇ ಹೇಳುತ್ತೇವೆ ಎಂದರು.
ಆ.25 ಅಥವಾ 26ರೊಳಗೆ ಅನ್ನಭಾಗ್ಯ ಯೋಜನೆಯ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣವನ್ನ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುತ್ತೇವೆ. ಕಳೆದ ತಿಂಗಳು ಡಿಬಿಟಿ ವಿಚಾರವಾಗಿ ಹಣ ಹಾಕುವುದು ತಡವಾಯಿತು. ಆಹಾರ ಇಲಾಖೆಯಲ್ಲಿ 2,181 ಖಾಲಿ ಹುದ್ದೆ ಭರ್ತಿಗೆ ನಿರ್ಧಾರ ಮಾಡಲಾಗಿದೆ ಎಂದರು.
ಸೆಪ್ಟಂಬರ್ ನಲ್ಲೂ ಹೆಚ್ಚುವರಿ 5 ಕೆ.ಜಿ ಅಕ್ಕಿ ಸಿಗಲ್ಲ. ಅಕ್ಕಿ ಕೊಡಲು ಆಂಧ್ರ ತೆಲಂಗಾಣ ಒಪ್ಪಿವೆ. ಅಕ್ಕಿದರದ ಬಗ್ಗೆ ಮಾತುಕತೆ ನಡೆಸುತ್ತೇವೆ ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.
Key words: APL-BPL card- application – not allowed – Food Minister -KH Muniyappa