ಬೆಂಗಳೂರು, ಫೆಬ್ರವರಿ 14, 2022 (www.justkannada.in): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 63 ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಹೆಚ್ಚಿನ ಮಾಹಿತಿಗಾಗಿ rec21.ksp-online.in ಗೆ ಭೇಟಿ ನೀಡಿ. ಫೆಬ್ರವರಿ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತ ಇಲ್ಲಿದೆ ಮಾಹಿತಿ.
ಸಂಸ್ಥೆ | ಕರ್ನಾಟಕ ರಾಜ್ಯ ಪೊಲೀಸ್ |
ಹುದ್ದೆಯ ಹೆಸರು | ಸಬ್ ಇನ್ಸ್ಪೆಕ್ಟರ್ |
ಒಟ್ಟು ಹುದ್ದೆಗಳು | 63 |
ವಿದ್ಯಾರ್ಹತೆ | ಪಿಯುಸಿ |
ಅರ್ಜಿ ಸಲ್ಲಿಕೆ ಬಗೆ | ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ | 10/02/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 03/03/2022 |
ವಿದ್ಯಾರ್ಹತೆ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ ಪಿಯುಸಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಮಾರ್ಚ್ 3, 2022ಕ್ಕೆ ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ: OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಅರ್ಜಿ ಶುಲ್ಕ: ಸಾಮಾನ್ಯ, 2A, 2B, 3A, 3B ಅಭ್ಯರ್ಥಿಗಳು: ರೂ.500/-
SC/SC (A)/ST ಅಭ್ಯರ್ಥಿಗಳು: ರೂ.250/-
ಆಯ್ಕೆ ಪ್ರಕ್ರಿಯೆ: ದೈಹಿಕ ಗುಣಮಟ್ಟದ ಪರೀಕ್ಷೆ
ಸಹಿಷ್ಣುತೆ ಪರೀಕ್ಷೆ
ದೈಹಿಕ ದಕ್ಷತೆ ಪರೀಕ್ಷೆ