KSOU ವತಿಯಿಂದ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ, ಜುಲೈ 25,2024 (www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸ್ನಾತಕ/ ಸ್ನಾತಕೋತ್ತರ ಪದವಿಗಳು, ಡಿಪ್ಲೊಮಾ ಹಾಗೂ ಯುಜಿ/ಪಿಜಿ ಸರ್ಟಿಫಿಕೇಟ್  ಶಿಕ್ಷಣ ಕ್ರಮಗಳಿಗೆ ಜುಲೈ 22 ರಿಂದ ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಬಾಪೂಜಿನಗರ ಇಲ್ಲಿ ಆನ್ ಲೈನ್ ಮೂಲಕ ಪ್ರವೇಶಾತಿಯನ್ನು ಪ್ರಾರಂಭಿಸಲಾಗಿದ್ದು, ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ www.ksoumysuru.ac.inದಲ್ಲಿ ಲಭ್ಯವಿರುವ ವಿವರಣಾ ಪುಸ್ತಕದಲ್ಲಿ ಎಲ್ಲಾ ವಿವರಗಳು ನೀಡಿದ್ದು, ವಿದ್ಯಾರ್ಥಿಗಳು ಅದರನ್ವಯ ಅರ್ಹ ಶಿಕ್ಷಣಕ್ರಮಗಳಿಗೆ ಆನ್ ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಅಥವಾ ಖುದ್ದು ಅಗತ್ಯ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿದರೆ ಪ್ರವೇಶಾತಿ ಪೂರ್ಣ ಪ್ರಕ್ರಿಯೆಯನ್ನು ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 98449-65515 ಅನ್ನು ಸಂಪರ್ಕಿಸಬಹುದಾಗಿದೆ.

ವಿದ್ಯಾರ್ಥಿಗಳು Online ನಲ್ಲಿ ಅರ್ಜಿ ಸಲ್ಲಿಸಿ ಅಥವಾ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬೇಕೆಂದು ಕ.ರಾ.ಮು.ವಿ ನಿರ್ದೇಶಕರಾದ ದಿಲೀಪ. ಡಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Application, Invitation, Admission, KSOU