ತಾಲ್ಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ: ವಿವರ ಇಲ್ಲಿದೆ ನೋಡಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್, 29, 2024 (www.justkannada.in) : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೋಷಣ್ ಅಭಿಯಾನ ಯೋಜನೆಯಡಿಯಲ್ಲಿ ತಾಲ್ಲೂಕು ಮಟ್ಟದಲ್ಲಿ ಖಾಲಿ ಇರುವ ದೇವನಹಳ್ಳಿ ತಾಲ್ಲೂಕು ಸಂಯೋಜಕರು-01 ಹುದ್ದೆಯನ್ನು ನೇರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು 21 ರಿಂದ 45 ವರ್ಷ ವಯೋಮಿತಿಯೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ ಮತ್ತು ಮಾನದಂಡ..

ಪದವೀಧರರಾಗಿರಬೇಕು, ಕಂಪ್ಯೂಟರ್ ನಿರ್ವಹಣೆ / ತಂತ್ರಜ್ಞಾನದಲ್ಲಿ ಮತ್ತು ಸಾಫ್ಟ್ ವೇರ್ ಅಪ್ಲಿಕೇಷನ್ ನಲ್ಲಿ ಕಾರ್ಯನಿರ್ವಹಿಸಿರುವ ಕನಿಷ್ಠ 02 ವರ್ಷಗಳ ಅನುಭವ ಹೊಂದಿರತಕ್ಕದ್ದು. ಸ್ಥಳೀಯ ಹಾಗೂ ಆಂಗ್ಲಭಾಷೆಯಲ್ಲಿ ಉತ್ತಮ ಸಂವಹನ ಹಾಗೂ ಬರೆಯುವ ಕೌಶಲ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನದ ಜೊತೆಗೆ ಕಡ್ಡಾಯವಾಗಿ ಸ್ಥಳೀಯ ಅಭ್ಯರ್ಥಿಗಳಾಗಿರಬೇಕು.

ಅರ್ಜಿ ಸಲ್ಲಿಸಲು ಕಡೆಯ ದಿನ ಜುಲೈ 15 ಸಂಜೆ 05:00 ಗಂಟೆಯೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಕಛೇರಿಗೆ ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಗಳನ್ನು ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ:206, 2ನೇಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ: 080-29787445 ಇಲ್ಲಿಗೆ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Application, Invitation, post, Taluk Co-ordinator