ಮೈಸೂರು ಮೇ. 8, 2019 (WWW.JUSTKANNADA.IN) : ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು ಪ್ರವೇಶಾತಿಗೆ ವಿದ್ಯಾರ್ಥಿಗಳಿಂದ ಹಾಗೂ ಮೌಲಾನ ಅಜಾದ್ ಮಾದರಿ ಶಾಲೆಗಳಿಗೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2019-20ನೇ ಸಾಲಿನ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಮೈಸೂರು ತಾಲ್ಲೂಕು ದೊಡ್ಡಕಾನ್ಯದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಪಿರಿಯಾಪಟ್ಟಣ ತಾಲ್ಲೂಕು ಹಲಗನಹಳ್ಳಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೈಸೂರು ಜಿಲ್ಲೆ, ಮೈಸೂರುರವರ ಕಛೇರಿ # 446, ಎಸ್.ಕೆ.ಎರ್. ವಿದ್ಯಾಸಂಸ್ಥೆ, ಸರಸ್ವತಿ ನಿಲಯ, ಕೆಂಪನಂಜಾಂಭ ಆಗ್ರಹಾರ, ಕೆ.ಆರ್. ಮೊಹಲ್ಲಾ, ಮೈಸೂರು- 570024 ಇಲ್ಲಿ ಮೇ 31 ರ ಸಂಜೆ 5.00 ಗಂಟೆಯವರೆಗೆ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 10 ರೊಳಗೆ ವಿದ್ಯಾರ್ಥಿನಿಲಯಗಳಲ್ಲಿ ಅಥವಾ ಕಛೇರಿಯಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೈಸೂರು ಅಥವಾ ದೂರವಾಣಿ ಸಂಖ್ಯೆ: 0821-2422088 ಮೂಲಕ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆ ತಿಳಿಸಿದ್ದಾರೆ.
ಬಾಲಕಿಯರ ಪಿಯುಸಿ ಪ್ರವೇಶಾತಿ:ಅರ್ಜಿ ಆಹ್ವಾನ
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು (ಆಂಗ್ಲ ಮಾದ್ಯಮ) ಈ ಕಾಲೇಜಿಗೆ 2019-20ನೇ ಸಾಲಿನ ಪ್ರಥಮ (ವಿಜ್ಞಾನ ಮತ್ತು ವಾಣಿಜ್ಯ ) ಮತ್ತು ದ್ವಿತೀಯ (ವಿಜ್ಞಾನ ಮತ್ತು ವಾಣಿಜ್ಯ) ಪಿ.ಯು.ಸಿ. ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು ಮೈಸೂರು ತಾಲ್ಲೂಕು ದೊಡ್ಡಕಾನ್ಯ ಗ್ರಾಮದಲ್ಲಿರುವ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೈಸೂರು ಜಿಲ್ಲೆ, ಮೈಸೂರುರವರ ಕಛೇರಿ # 446, ಎಸ್.ಕೆ.ಎರ್. ವಿದ್ಯಾಸಂಸ್ಥೆ, ಸರಸ್ವತಿ ನಿಲಯ, ಕೆಂಪನಂಜಾಂಭ ಆಗ್ರಹಾರ, ಕೆ.ಆರ್. ಮೊಹಲ್ಲಾ, ಮೈಸೂರು- 570024 ಇಲ್ಲಿ ಜೂನ್ 15 ರ ಸಂಜೆ 5.00 ಗಂಟೆಯವರೆಗೆ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 30 ರೊಳಗೆ ಕಾಲೇಜಿನಲ್ಲಿ ಅಥವಾ ಕಛೇರಿಯಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೈಸೂರು ಅಥವಾ ದೂರವಾಣಿ ಸಂಖ್ಯೆ: 0821-2422088 ಮೂಲಕ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆ ತಿಳಿಸಿದ್ದಾರೆ.
ಮೌಲಾನ ಅಜಾದ್ ಮಾದರಿ ಶಾಲೆಗಳಿಗೆ ಅತಿಥಿ ಶಿಕ್ಷಕರು:ಅರ್ಜಿ ಆಹ್ವಾನ
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಹುಣಸೂರು ಮತ್ತು ಪಿರಿಯಾಪಟ್ಟಣ ತಾಲ್ಲೂಕಿನ ಹಲಗನಹಳ್ಳಿಯ ಮೌಲಾನ ಅಜಾದ್ ಮಾದರಿ ಶಾಲೆ, (ಆಂಗ್ಲ ಮಾದ್ಯಮ) ಈ ಶಾಲೆಗಳಿಗೆ 2019-20ನೇ ಸಾಲಿನ ಅತಿಥಿ ಶಿಕ್ಷಕರುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕನ್ನಡ, ಇಂಗ್ಲೀಷ್, ಹಿಂದಿ, ಗಣಿತ, ವಿಜ್ಞಾನ ಮತ್ತು ಸಮಾಜ ವಿಷಯಗಳನ್ನು ಬೋಧನೆ ಮಾಡಲು ಅಸಕ್ತಿಯುಳ್ಳ ಅತಿಥಿ ಶಿಕ್ಷಕರು ಸ್ವವಿವರ ಸಲ್ಲಿಸಲು ಅರ್ಜಿಗಳನ್ನು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೈಸೂರು ಜಿಲ್ಲೆ, ಕಛೇರಿ # 446, ಎಸ್.ಕೆ.ಎರ್. ವಿದ್ಯಾಸಂಸ್ಥೆ, ಸರಸ್ವತಿ ನಿಲಯ, ಕೆಂಪನಂಜಾಂಭ ಆಗ್ರಹಾರ, ಕೆ.ಆರ್. ಮೊಹಲ್ಲಾ, ಮೈಸೂರು- 570024 ಇಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಮೇ 25 ರ ಸಂಜೆ 5 ಗಂಟೆಯೊಳಗೆ ಕಾಲೇಜಿನಲ್ಲಿ ಅಥವಾ ಕಛೇರಿಯಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೈಸೂರು ಅಥವಾ ದೂರವಾಣಿ ಸಂಖ್ಯೆ: 0821-2422088 ಮೂಲಕ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆ ತಿಳಿಸಿದ್ದಾರೆ.
–
applications invited for guest teachers post from minority deportment, mysore