ಬೆಂಗಳೂರು,ಡಿಸೆಂಬರ್,30,2023(www.justkannada.in): ತಾವು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿ ನೇಮಕವಾಗಿರುವ ಕುರಿತು ಶಾಸಕ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಬಸವರಾಜ ರಾಯರೆಡ್ಡಿ, ನನಗೆ ಯಾವುದೇ ಅಸಮಾಧಾವಿಲ್ಲ. ಅಸಮಾಧಾನದ ಪ್ರಶ್ನೆಯೇ ಇಲ್ಲ. ಸಿಎಂಗೆ ಆರ್ಥಿಕ ಸಲಹೆಗಾರರು ಬೇಕೆಂದು ನನಗೆ ಹುದ್ದೆ ಕೊಟ್ಟಿದ್ದಾರೆ. ನಮ್ಮ ವರಿಷ್ಠರು, ಸಿಎಂ, ಕೆಪಿಸಿಸಿ ಅಧ್ಯಕ್ಷರು ಈ ಹುದ್ದೆ ನೀಡಿದ್ದಾರೆ. ಈ ಹುದ್ದೆಯನ್ನ ಒಪ್ಪಿಕೊಂಡರೆ ರಾಜ್ಯಕ್ಕೆ ಒಳ್ಳೆಯದಾಗುತ್ತೆ ಎಂದರು. ಹೀಗಾಗಿ ಒಪ್ಪಿಕೊಂಡಿದ್ದೇನೆ ಎಂದು ತಿಳಿಸಿದರು.
ಇದೇ ಮೊದಲ ಬಾರಿಗೆ ಸಿಎಂ ಆರ್ಥಿಕ ಸಲಹೆಗಾರರ ಹುದ್ದೆ ನೀಡಿದ್ದಾರೆ. ಇದು ಸವಾಲಿನ ಹುದ್ದೆ ಎಂದು ಬಸವರಾಜ ರಾಯರೆಡ್ಡಿ ತಿಳಿಸಿದರು.
Key words: Appointed -Economic Adviser – CM-MLA -Basavaraja Rayareddy- reaction