ಸಿಎಂ ಸಿದ್ದರಾಮಯ್ಯ, ಭೈರತಿ ಸುರೇಶ್ ರನ್ನು ಬಂಧಿಸಿ ವಿಚಾರಣೆಗೊಳಪಡಿಸಿ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು,ಅಕ್ಟೋಬರ್,19,2024 (www.justkannada.in): ಮುಡಾ ಹಗರಣ ಸಂಬಂಧ ಸಚಿವ ಭೈರತಿ ಸುರೇಶ್ ಫೈಲ್ ಗಳನ್ನು ತೆಗೆದುಕೊಂಡು ಹೋಗಿ ಸುಟ್ಟಿ ಹಾಕಿದ್ದಾರೆ. ಮೊದಲು ಅವರನ್ನ ಬಂಧಿಸಿ ವಿಚಾರಣೆಗೊಳಪಡಿಸಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಬೈರತಿ ಸುರೇಶ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದರೆ ಮೈಸೂರು ನಗರಾಭಿವೃದ್ಧಿ ಕಡತಗಳ ರಹಸ್ಯ ಬಯಲಾಗಲಿದೆ. ಮುಡಾ ಕಚೇರಿಯಿಂದ ಎಷ್ಟು ಕಡತಗಳನ್ನು ಹೊತ್ತುಕೊಂಡು ಬಂದರು, ಎಲ್ಲಿ ಸುಟ್ಟು ಹಾಕಿದರು ಎನ್ನುವುದು ತಿಳಿಯಲು ತನಿಖಾ ಸಂಸ್ಥೆಗಳು ಅವರನ್ನು ಕೂಡಲೇ ಬಂಧಿಸಬೇಕು. ಹಾಗೆಯೇ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯರನ್ನೂ ವಿಚಾರಣೆಗೆ ಒಳಪಡಿಸಿ  ಎಂದು ಒತ್ತಾಯಿಸಿದರು.

ಶುದ್ಧರಾಮಯ್ಯ ಎಂದು ಹೇಳಿಕೊಳ್ಳುತ್ತಿದ್ದ‌ ಸಿದ್ದರಾಮಯ್ಯ ಅವರ ಮುಖವಾಡ ಈಗ ಕಳಚಿ ಬಿದ್ದಿದೆ. ಒಂದಲ್ಲ, ಮೂರು ಪ್ರಕರಣಗಳು ಭ್ರಷ್ಟಾಚಾರ ಬಯಲಾಗಿವೆ. ಅಷ್ಟೇ ಅಲ್ಲ ಹೈಕೋರ್ಟ್, ಅಧೀನ ನ್ಯಾಯಾಲಯಗಳಿಂದ ಛೀಮಾರಿ ಕೇಳಿಬಂದಿವೆ ಎಂದು ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.

Key words: Arrest, CM Siddaramaiah, Bhairati Suresh, Shobha Karandlaje