ಬಿಗ್ ಬಾಸ್ ಇಬ್ಬರು ಮಾಜಿ ಸ್ಪರ್ಧಿಗಳು ಪೊಲೀಸರ ವಶಕ್ಕೆ

ಬೆಂಗಳೂರು,ಮಾರ್ಚ್,24,2025 (www.justkannada.in): ‘ಬಿಗ್ ಬಾಸ್ ಕನ್ನಡ ಸೀಸನ್​ 10’ ಶೋನಲ್ಲಿ ಸ್ಪರ್ಧಿಸಿದ್ದ ಮಾಜಿ ಸ್ಪರ್ಧಿಗಳಾದ ರಜತ್, ವಿನಯ್​ ಗೌಡ ಇಬ್ಬರನ್ನು ಬಸವೇಶ್ವರನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಜತ್ ಕಿಶನ್ ಮತ್ತು ವಿನಯ್ ಗೌಡ  ಲಾಂಗ್ ಹಿಡಿದು ರೀಲ್ಸ್ ಮಾಡಿದ್ದು ಅವರ ಮೇಲೆ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ವಿನಯ್ ಗೌಡ ಮತ್ತು ರಜತ್ ಕಿಶನ್  ಅವರನ್ನು ಬಸವೇಶ್ವರನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರೀಲ್ಸ್ ಮಾಡುವಾಗ ಲಾಂಗ್ ಹಿಡಿದಿದ್ದಕ್ಕಾಗಿ ಇಬ್ಬರಿಗೂ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. ರಜತ್ ಕಿಶನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚೆಗೆ ಹಂಚಿಕೊಂಡ ಒಂದು ರೀಲ್ಸ್ ವಿವಾದಕ್ಕೆ ಕಾರಣ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ರಜತ್ ಅವರು ಈ ರೀಲ್ಸ್   ಅಪ್​ಲೋಡ್ ಮಾಡಿದ್ದರು. ಅದು ವೈರಲ್ ಆದ ಬಳಿಕ ಕೇಸ್ ದಾಖಲಾಗಿತ್ತು.

ಈ ಸಂಬಂಧ ವಿಚಾರಣೆಗೆ ಬರುವಂತೆ ಇಬ್ಬರಿಗೂ ನೋಟಿಸ್ ನೀಡಲಾಗಿತ್ತು. ಇದೀಗ ವಿಚಾರಣೆ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Key words: Bigg Boss, two ,former competitors, police