ರಾಮನಗರ,ಫೆ,19,2020(www.justkannada.in): ಅತ್ಯಾಚಾರ, ಬಾಲಕಿಯರ ಅಪಹರಣ ಸೇರಿದಂತೆ ಹಲವು ಪ್ರಕರಣಗಳ ಆರೋಪ ಎದುರಿಸುತ್ತಿರುವ ಬಿಡದಿ ನಿತ್ಯಾನಂದ ಸ್ವಾಮಿ ವಿರುದ್ದ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.
ರಾಮನಗರ 3ನೇ ಜಿಲ್ಲಾ ಸತ್ರ ನ್ಯಾಯಾಲಯ ನಿತ್ಯಾನಂದ ಸ್ವಾಮಿ ವಿರುದ್ದ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ. ಹೈಕೋರ್ಟ್ನಲ್ಲಿ ಜಾಮೀನು ರದ್ದುಗೊಂಡ ಹಿನ್ನೆಲೆಯಲ್ಲಿ ಕೋರ್ಟ್ ಈ ಆದೇಶ ಹೊರಡಿಸಿದ್ದು ಶೀಘ್ರದಲ್ಲಿ ನಿತ್ಯಾನಂದನನ್ನು ಬಂಧಿಸಿ ನ್ಯಾಯಾಲಯದ ಎದುರು ಹಾಜರುಪಡಿಸುವಂತೆ ರಾಜ್ಯ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದೆ.
ಅತ್ಯಾಚಾರ, ಬಾಲಕಿಯರ ಅಪರಹಣ ಆರೋಪ ಎದುರಿಸುತ್ತಿರುವ ನಿತ್ಯಾನಂದಸ್ವಾಮಿ ವಿದೇಶಕ್ಕೆ ಪರಾರಿಯಾಗಿದ್ದು, ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
Key words: Arrest warrant –issued- against- Nithyananda Swamy