ಹುಬ್ಬಳ್ಳಿ, ಡಿಸೆಂಬರ್ 14,2024 (www.justkannada.in): ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯ ನಿಸ್ಸಿಮರು. ಎಲ್ಲರ ಮೀಸಲಾತಿ ತೆಗೆದು ಮುಸ್ಲಿಮರಿಗೆ ಕೊಡಲು ಹೊರಟಿದ್ದಾರೆ ಎಂದು ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಆರೋಪ ಮಾಡಿದರು.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅರವಿಂದ ಬೆಲ್ಲದ್, ಸಿಎಂ ಸಿದ್ದರಾಮಯ್ಯ ಅವರಿಗೆ ಮುಸ್ಲಿಮರೆಂದರೆ ಪ್ರೀತಿ. ಅವರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡುತ್ತಾರೆ. ಎಲ್ಲರ ಮೀಸಲಾತಿ ತೆಗೆದು ಮುಸ್ಲಿಮರಿಗೆ ಕೊಡಲು ಹೊರಟಿದ್ದಾರೆ. ಹಸಿ ಗೋಡೆ ಮೇಲೆ ಹಳ್ಳು ಒಗೆಯುವ ಕೆಲಸವನ್ನು ಸಿಎಂ ಮಾಡಿದ್ದಾರೆ. ಮೀಸಲಾತಿ ಕೊಡುವುದು ಹೇಗೆ ಸಂವಿಧಾನ ವಿರೋಧಿಯಾಗುತ್ತೆ? ಈ ಬಗ್ಗೆ ಸಿಎಂ ಶ್ವೇತ ಪತ್ರ ಹೊರಡಿಸಲಿ ಎಂದು ಸವಾಲು ಹಾಕಿದರು.
ಲಿಂಗಾಯತರಿಗೆ, ಒಕ್ಕಲಿಗರಿಗೆ, ಮರಾಠರಿಗೆ ಮೀಸಲಾತಿ ಕೊಡಲ್ಲ ಅಂತ ಘೋಷಣೆ ಮಾಡಲಿ. ಸಂವಿಧಾನದ ವಿರುದ್ಧವಾಗಿ ಮುಸ್ಲಿಮರಿಗೆ ಮೀಸಲಾತಿ ಕೊಡಲಾಗಿದೆ. ಅದರ ಬಗ್ಗೆ ಇವರು ಮಾತನಾಡುವುದಿಲ್ಲ. ಕಾಂಗ್ರೆಸ್ ಸರ್ಕಾರ ನಮಗೆ ಮೀಸಲಾತಿ ಕೊಡುತ್ತೆ ಅಂತ ಗ್ಯಾರಂಟಿ ಇಲ್ಲ. ಲಾಠಿ ಚಾರ್ಜ್ ಸಂಪೂರ್ಣ ಜವಾಬ್ದಾರಿ ಸಿಎಂ ಸಿದ್ದರಾಮಯ್ಯನವರದ್ದು ಎಂದರು.
Key words: Arvind Bellad, against, CM Siddaramaiah, reservation