ಬೆಂಗಳೂರು,ಮೇ,10,2022(www.justkannada.in): ಆಂಧ್ರಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ‘ಅಸಾನಿ’ ಚಂಡಮಾರುತ ತೀವ್ರತೆ ಹೆಚ್ಚಾಗಿದ್ದು, ಈ ಮೂರು ರಾಜ್ಯಗಳಲ್ಲಿ ಮಳೆ ಮತ್ತು ಬಲವಾದ ಗಾಳಿಯ ಮುನ್ಸೂಚನೆಯನ್ನ ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಈ ಮಧ್ಯೆ ರಾಜ್ಯಕ್ಕೂ ಅಸಾನಿ ಚಂಡಮಾರುತ ಭೀತಿ ಎದುರಾಗಿದ್ದು, ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ದಕ್ಷಿಣ ಉತ್ತರ ಒಳನಡಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಹವಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ.
ಅಸಾನಿ ಚಂಡಮಾರುತವು ಮೇ 10ರ ಅಂತ್ಯದವರೆಗೆ ವಾಯುವ್ಯಕ್ಕೆ ಚಲಿಸುವ ಸಾಧ್ಯತೆಯಿದೆ ಮತ್ತು ಆಂಧ್ರಪ್ರದೇಶ ಕರಾವಳಿ ಮತ್ತು ಪಕ್ಕದ ಒಡಿಶಾ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯನ್ನು ತಲುಪುತ್ತದೆ. ಮಂಗಳವಾರ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
Key words: asani-storn- Heavy rains -three days