ಬೆಂಗಳೂರು,ಫೆಬ್ರವರಿ,17,2023(www.justkannada.in): ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರು, ಗ್ರಂಥ ಪಾಲಕರ ಗೌರವಧನ 1000 ರೂ. ಹೆಚ್ಚಳ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕಾಗಿ 775 ಕೋಟಿ ರೂ. ಅನುದಾನ ಹೆಚ್ಚಳ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ವಿಧಾನಸಭೆಯಲ್ಲಿ ತಮ್ಮ ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ ಕ್ಷೇತ್ರಕ್ಕೆ ಕಾರ್ಯಕ್ರಮಗಳನ್ನ ಘೋಷಿಸಿದ್ದಾರೆ. 69,000 ಬೀದಿ ವ್ಯಾಪಾರಿಗಳಿಗೆ 70 ಕೋಟಿ ಸಾಲ ಮಂಜೂರು. ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 49,031 ಕೋಟಿ ಮೀಸಲು. ಎಸ್ಸಿ, ಎಸ್ಟಿ ನಿಗಮಗಳಿಗೆ 795 ಕೋಟಿ ರೂ. ಒದಗಿಸಲಾಗಿದೆ. ಎಸ್ಸಿ, ಎಸ್ಟಿ BPL ಕಾರ್ಡ್ ಹೊಂದಿದವರಿಗೆ ಅಮರ್ ಜ್ಯೋತಿ ಯೋಜನೆಯಡಿ 75 ಯೂನಿಟ್ ಉಚಿತ ವಿದ್ಯುತ್.
ಮಾರಣಾಂತಿಕ ಕಾಯಿಲೆ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರಿಗೆ 50,000 ರೂ. ಆರ್ಥಿಕ ಭದ್ರತೆ ಜೊತೆಗೆ ಸ್ವಯಂ ನಿವೃತ್ತಿ ಅವಕಾಶ.ಜಗಳೂರು ಸೇರಿದಂತೆ ವಿವಿಧ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
Key words: asha workers- salary-Rs.1000- Increase-budget