ಹೈದರಾಬಾದ್, ಫೆಬ್ರವರಿ 29, 2020 (www.justkannada.in): ಸೆಪ್ಟೆಂಬರ್ನಲ್ಲಿ ದುಬೈನಲ್ಲಿ ನಡೆಯಲಿರುವ ಏಷ್ಯಾಕಪ್ನಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿವೆ.
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈ ಮಾಹಿತಿ ನೀಡಿದ್ದಾರೆ. ಮುಂಬರುವ ಏಷ್ಯಾಕಪ್ ಪಂದ್ಯಾವಳಿ ದುಬೈನಲ್ಲಿ ನಡೆಯಲಿದ್ದು, ಭಾರತ ಮತ್ತು ಪಾಕಿಸ್ತಾನ ತಂಡಗಳಿಗೆ ಈ ಪಂದ್ಯಾವಳಿಯಲ್ಲಿ ಭಾಗವಹಿಸಲು ಅವಕಾಶ ಸಿಗಲಿದೆ.
ಸೆಪ್ಟೆಂಬರ್ನಲ್ಲಿ ನಡೆಯಲಿರುವ ಈ ಪಂದ್ಯಾವಳಿಯನ್ನು ಮೊದಲು ಪಾಕಿಸ್ತಾನದಲ್ಲಿ ಆಯೋಜನೆ ಮಾಡಲಾಗಿತ್ತು. ಆದ್ರೆ ಭದ್ರತೆ ಕಾರಣಗಳಿಂದ ನಮ್ಮ ತಂಡ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವಿದಿಲ್ಲವೆಂದು ಬಿಸಿಸಿಐ ಹೇಳಿತ್ತು. ಬಿಸಿಸಿಐ ಈ ನಿರ್ಧಾರದ ನಂತ್ರ ಪಂದ್ಯವನ್ನು ದುಬೈಗೆ ವರ್ಗಾವಣೆ ಮಾಡಲಾಗಿತ್ತು.