ಇಂದು ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು ಎದುರಿಸಲಿದೆ.
ಏಷ್ಯಾಕಪ್ ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿರುವ ಭಾರತ ತಂಡ ಸೂಪರ್ 4 ಹಂತದ ಕೊನೆಯ ಪಂದ್ಯದಲ್ಲಿ ಬಾಂಗ್ಲದೇಶದ ವಿರುದ್ಧ ರೋಚಕ ಸೆಣೆಸಾಟದ ಬಳಿಕ ಸೋಲು ಕಂಡಿತ್ತು.
ಫೈನಲ್ ಪಂದ್ಯದಲ್ಲಿ ಭಾರತ ಬಲಿಷ್ಠ ಆಟಗಾರರ ಪಡೆಯೊಂದಿಗೆ ಮತ್ತೆ ಕಣಕ್ಕಿಳಿಯಲಿದ್ದು ಯಾರೆಲ್ಲಾ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಳ್ಳಬಹುದು ಎನ್ನುವುದು ಕುತೂಹಲ ಮೂಡಿಸಿದೆ.
ವಿಶ್ವಕಪ್ ಸನಿಹದಲ್ಲಿ ಏಷ್ಯಾ ಕಪ್ ಎರಡು ತಂಡಗಳಿಗೂ ಅತ್ಯಂತ ಮಹತ್ವದ್ದಾಗಿರಲಿದೆ. ಹೀಗಾಗಿ ರೋಹಿತ್ ಶರ್ಮಾ ಪಡೆ ಈ ಪಂದ್ಯಕ್ಕೆ ಬಲಿಷ್ಠ ಆಡುವ ಬಳಗದೊಂದಿಗೆ ಕಣಕ್ಕಿಳಿಯಲು ಸಿದ್ಧವಾಗಿದೆ.
ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ರಾಹುಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದು ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿ ಅಬ್ಬರಿಸಿದ್ದರು.
ಸಂಭಾವ್ಯ ಆಡುವ ಬಳಗ:
ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ