ಬೆಂಗಳೂರು,ನವೆಂಬರ್,08,2020(www.justkannada.in) : ಉಪಚುನಾವಣಾ ಫಲಿತಾಂಶ ಪ್ರಕಟಗೊಳ್ಳುವ ಮುನ್ನವೇ ಬಿಜೆಪಿಯಲ್ಲಿ ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳ ಲಾಭಿ ಆರಂಭಗೊಂಡಿದ್ದು, ಪರಿಷತ್ ಸದಸ್ಯರು ದೆಹಲಿಗೆ ತೆರಳಲಿದ್ದಾರೆ.
ಉಪಚುನಾವಣಾ ಫಲಿತಾಂಶ ಹೊರಬರಲು ಇನ್ನೇನು ಎರಡು ದಿನ ಬಾಕಿ
ಶಿರಾ ಹಾಗೂ ಆರ್.ಆರ್.ನಗರ ಉಪಚುನಾವಣಾ ಫಲಿತಾಂಶ ಹೊರಬರಲು ಇನ್ನೇನು ಎರಡು ದಿನಗಳು ಬಾಕಿ ಇದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರೊಂದಿಗೆ ಸಚಿವ ಸ್ಥಾನದ ಆಕಾಂಕ್ಷಿಗಳಾದ ಆರ್.ಶಂಕರ್ ಹಾಗೂ ಎಚ್.ವಿಶ್ವನಾಥ್ ದೆಹಲಿಗೆ ತೆರಳಿದ್ದು, ಇಂದು ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಡಲಿದ್ದಾರೆ.
ಕೆಲವೇ ದಿನಗಳಲ್ಲಿ ಸಂಪುಟ ವಿಸ್ತರಣೆ ಖಚಿತ
ಉಪಚುನಾವಣೆ ಮುಗಿದ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಈಗಾಗಲೇ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಕೆಲವೇ ದಿನಗಳಲ್ಲಿ ಸಂಪುಟ ವಿಸ್ತರಣೆ ಖಚಿತವಾಗಿದ್ದು, ಸಚಿವಾಕಾಂಕ್ಷಿಗಳ ಭಾರೀ ಲಾಬಿ ಆರಂಭವಾಗಿದೆ ಎಂದು ತಿಳಿದು ಬಂದಿದೆ.
key words : Aspirants-ministerial-position-BJP