ಬೆಂಗಳೂರು,ಮೇ,12,2023(www.justkannada.in): ನಾಳೆ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ನಾಳೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ ಮಾಡಲಾಗುತ್ತಿದೆ.
ಮತ ಎಣಿಕೆ ಸಮಯದಲ್ಲಿ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು ಗೆದ್ದ ಹಾಗು ಸೋತ ಅಭ್ಯರ್ಥಿಗಳ ಪರವಾಗಿ ಪ್ರತಿಭಟನೆ ಮಾಡುವ ಸಾಧ್ಯತೆ ಹಿನ್ನಲೆ ಮತ ಎಣಿಕೆ ಕೇಂದ್ರಗಳನ್ನೊಳಗೊಂಡು ಬೆಂಗಳೂರಿನಾದ್ಯಂತ ನಾಳೆ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ.
ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಶರಣಪ್ಪ, ನಾಳೆ ವಿಧಾನಸಭೆ ಚುನಾವಣಾ ಫಲಿತಾಂಶ ಹಿನ್ನೆಲೆ ಬೆಂಗಳೂರಿನಲ್ಲಿ 5ಕಡೆ ಮತ ಎಣಿಕೆ ಕೇಂದ್ರಗಳನ್ನ ಸ್ಥಾಪಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭಧ್ರತೆ ವಹಿಸಲಾಗಿದೆ. ಸ್ಟ್ರಾಂಗ್ ರೂಮ್ ಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸಿಆರ್ ಪಿಎಫ್, ಬಿಎಸ್ ಎಫ್, ಕೆಎಸ್ ಆರ್ ಪಿ ನಿಯೋಜನೆ ಮಾಡಲಾಗುತ್ತದೆ.
ಪ್ರತಿ ಮತಎಣಿಕೆ ಕೇಂದ್ರದ ಬಳಿ ಇಬ್ಬರು ಡಿಸಿಪಿಗಳನ್ನ ನಿಯೋಜನೆ ಮಾಡಲಾಗುತ್ತದೆ. ನಾಳೆ ಬೆಂಗಳೂರು ನಗರದಲ್ಲಿ 144 ಸೆಕ್ಷನ್ ಜಾರಿಯಾಗಲಿದ್ದು, ನಾಳೆ ಇಡೀ ದಿನ ಮದ್ಯ ಮಾರಾಟಕ್ಕೆ ನಿಷೇಧ ವಿಧಿಸಲಾಗಿದೆ ಎಂದು ಶರಣಪ್ಪ ತಿಳಿಸಿದ್ದಾರೆ.
Key words: Assembly –election- results- tomorrow.- 144 section-Bengaluru