ನವದೆಹಲಿ,ಅಕ್ಟೋಬರ್,8,2024 (www.justkannada.in): ಹರಿಯಾಣ ಮತ್ತು ಜಮ್ಮುಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು ಹರಿಯಾಣದಲ್ಲಿ ಬಿಜೆಪಿ ಜಮ್ಮುಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ಎಸ್‌ಸಿ ಮೈತ್ರಿಕೂಟ ಮುನ್ನಡೆ ಸಾಧಿಸಿದೆ.
ಹರಿಯಾಣದಲ್ಲಿ 90 ಕ್ಷೇತ್ರಗಳ ಪೈಕಿ ಬಿಜೆಪಿ 47 ಕಾಂಗ್ರೆಸ್ 36, ಇತರೇ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಜಮ್ಮುಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಕೂಟ 50 ಬಿಜೆಪಿ 24, ಪಿಡಿಪಿ 3 ಹಾಗೂ ಇದತೇ 13 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಹರಿಯಾಣದಲ್ಲಿ 90 ವಿಧಾನಸಭಾ ಕ್ಷೇತ್ರಗಳಿದ್ದು, ಸರಳ ಬಹುಮತಕ್ಕೆ 46 ಕ್ಷೇತ್ರಗಳಲ್ಲಿ ಗೆಲ್ಲಬೇಕಿದೆ. 92 ವಿಧಾನಸಭಾ ಕ್ಷೇತ್ರಗಳಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ದಶಕದ ಬಳಿಕ ಚುನಾವಣೆ ನಡೆದಿದೆ. ಸರಳ ಬಹುಮತಕ್ಕೆ ಯಾವುದೇ ಪಕ್ಷ 47 ಕ್ಷೇತ್ರಗಳಲ್ಲಿ ಗೆಲ್ಲಬೇಕಿದೆ.
Key words: Assembly elections, BJP, Haryana, Congress, leading , Jammu Kashmir