ಬೆಂಗಳೂರು,ಮಾರ್ಚ್,31,2023(www.justkannada.in): ಶಾಸಕ ಸ್ಥಾನಕ್ಕೆ ಎ.ಟಿ ರಾಮಸ್ವಾಮಿ ಇಂದು ರಾಜೀನಾಮೆ ಸಲ್ಲಿಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರಕಲಗೂಡು ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಶಾಸಕನಾಗಿ ಆಯ್ಕೆಯಾಗಿದ್ದ ಎ.ಟಿ ರಾಮಸ್ವಾಮಿ ಹಲವು ದಿನಗಳಿಂದ ಜೆಡಿಎಸ್ ನಿಂದ ದೂರವಿದ್ದರು. ಇದೀಗ ಇಂದು ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ಎಟಿ ರಾಮಸ್ವಾಮಿ ರಾಜೀನಾಮೆ ಸಲ್ಲಿಸಿದ್ದಾರೆ.
ಬಳಿಕ ಮಾತನಾಡಿದ ಅವರು, ಸಂತೋಷದಿಂದ ನಾನು ಶಾಸಕಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಶಾಸಕನಾಗಲು ಅವಕಾಶ ಮಾಡಿಕೊಟ್ಟ ಜೆಡಿಎಸ್ ಗೆ ಧನ್ಯವಾದ ಹೇಳುತ್ತೇನೆ. ನಾನು ವೈಯಕ್ತಿಕ ಹಿತಾಶಕ್ತಿಯಿಂದ ರಾಜಕೀಯ ಮಾಡಿಲ್ಲ. ನಾನು ಶಾಸಕನಾಗಿದ್ದಾಗ ಉತ್ತಮ ಕೆಲಸಗಳನ್ನ ಮಾಡಿದ್ದೇನೆ. ನಾನು ಸರಿ ಇದ್ರೆ ಸರಿ ತಪ್ಪಾಗಿದ್ದರೇ ತಪ್ಪು ಅಂತಾ ಹೇಳುತ್ತೇನೆ. ನಾನು ಜೆಡಿಎಸ್ ಬಿಟ್ಟೆ ಎಂದು ಎಲ್ಲೂ ಹೇಳಿಲ್ಲ. ಜೆಡಿಎಸ್ ನವರೆ ನನ್ನನ್ನು ಹೊರ ಹಾಕಿದ್ರು. ಭ್ರಷ್ಟಾಚಾರದ ವಿರುದ್ದ ಧ್ವನಿ ಎತ್ತಿದ್ದೇ ನನಗೆ ಮುಳುವಾಯಿತು ಎಂದು ಎ.ಟಿ ರಾಮಸ್ವಾಮಿ ತಿಳಿಸಿದರು.
Key words: AT Ramaswamy – submitted – resignation – MLA.