ಬೆಂಗಳೂರು,ಡಿಸೆಂಬರ್,5,2020(www.justkannada.in): ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಈ ಮಧ್ಯೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಕರವೇ ನಾರಾಯಣಗೌಡ ಮತ್ತು ಅವರ ಬಣದ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ಕಿಚ್ಚು ಹೆಚ್ಚಾಗಿದ್ದು ಟೌನ್ ಹಾಲ್ ಮುಂದೆ ವಿವಿಧ ಸಂಘಟನೆಗಳು ಧರಣಿ ನಡೆಸುತ್ತಿದ್ದರೇ ಅತ್ತ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು.
ಈ ವೇಳೆ ಮೌರ್ಯ ಸರ್ಕಲ್ ಬಳಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿದಂತೆ ಅನೇಕ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಕರೆ ನೀಡಿರುವಂತ ಕರ್ನಾಟಕ ಬಂದ್ ವೇಳೆ, ಕನ್ನಡ ಪರ ಸಂಘಟನೆಗಳು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿವೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ, ಕನ್ನಡ ಪಕ್ಷದ ವಾಟಾಳ್ ನಾಗರಾಜ್, ಸಾರಾ ಗೋವಿಂದ್ ಸೇರಿದಂತೆ ಅನೇಕರು ರಾಜ್ಯ ಸರ್ಕಾರ ನಿರ್ಧಾರಕ್ಕೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
Key words: Attempt -besiege – CM residence-Karave- Narayana Gowda -activitist detained – police.