ಬೆಂಗಳೂರು, ಡಿಸೆಂಬರ್ 31, 2019 (www.justkannada.in): ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಬಾಕ್ಸ್ ಆಫೀಸ್ ಲೆಕ್ಕಾಚಾರ ಶುರುವಾಗಿದೆ.
ಮೊದಲ ದಿನ ಈ ಚಿತ್ರ 12 ಕೋಟಿ ಕಲೆಕ್ಷನ್ ಮಾಡಿದೆ ಎನ್ನಲಾಗಿತ್ತು. ಶನಿವಾರ 11 ಕೋಟಿ ಹಾಗೂ ಭಾನುವಾರ 13 ಕೋಟಿ ರೂಪಾಯಿ ಗಳಿಸಿದೆ ಎನ್ನಲಾಗಿದೆ. ಇನ್ನು, ಸೋಮವಾರವೂ ಸಿನಿಮಾ ಉತ್ತಮ ಕಲೆಕ್ಷನ್ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಕ್ರಿಸಮಸ್ ತಿಂಗಳಾದ್ದರಿಂದ ಕೆಲ ಶಾಲಾ-ಕಾಲೇಜುಗಳಿಗೆ ರಜೆ ಇರುತ್ತದೆ. ಹೀಗಾಗಿ, ಚಿತ್ರಮಂದರಿಕ್ಕೆ ಬರುವವರ ಸಂಖ್ಯೆ ಕಡಿಮೆ ಆಗಿಲ್ಲ. ಸೋಮವಾರದ ಗಳಿಕೆ 5 ಕೋಟಿ ದಾಟಿದೆ ಎಂದು ಅಂದಾಜಿಸಲಾಗಿದೆ. ಆದರೆ, ಚಿತ್ರತಂಡ ಎಲ್ಲಿಯೂ ಅಧಿಕೃತವಾಗಿ ಹೇಳಿಕೊಂಡಿಲ್ಲ.